ಅಂಗವಿಕಲರಿಗೆ ಆತ್ಮಸ್ಥೆರ್ಯ ತುಂಬಿದ ಕ್ರೀಡಾಕೂಟ : ನಾಗರಾಜ್ ಜುಮ್ಮಣ್ಣನವರ

ದೈಹಿಕ ಶಿಕ್ಷಕರ ಹಾಗೂ ಅಂಗವಿಕಲ ಸರ್ಕಾರಿ ನೌಕರರ ಕ್ರೀಡಾಕೂಟದ ಉದ್ಘಾಟನೆ

ಕೊಪ್ಪಳ  : ವಿಶೇಷವಾಗಿ ವಿಕಲಚೇತನ ನೌಕರರಲ್ಲಿ ಆತ್ಮಧೈರ್ಯ ತುಂಬುವ ಕೆಲಸವನ್ನು ಜಿಲ್ಲೆಯ ಸರ್ಕಾರಿ ನೌಕರರ ಸಂಘದಿAದ ಮಾಡಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ್ ಜುಮ್ಮಣ್ಣನವರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ (ಫೆ. 06) ನಡೆದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಕರ ಹಾಗೂ ಅಂಗವಿಕಲ ಸರ್ಕಾರಿ ನೌಕರರ (ವಿಶೇಷ ಕ್ರೀಡಾಕೂಟ) ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ ಶಿಕ್ಷಕರಿಗೆ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ವಿಕಲಚೇತನ ನೌಕರರು ಸಾಮಾನ್ಯ ನೌಕರರ ಜತೆ ಸ್ಪರ್ಧೆ ಮಾಡಲು ಕಷ್ಟಸಾಧ್ಯವಾಗಿರುವುದರಿಂದ ಅವರುಗಳ ಬೇಡಿಕೆಯನ್ನು ಜಿಲ್ಲಾಡಳಿತದ ಮುಂದೆ ಮಂಡಿಸಿ ಪ್ರತ್ಯೇಕವಾಗಿ ಕ್ರೀಡಾಕೂಟ ಆಯೋಜಿಸಲಾಗಿದೆ. ಇಡೀ ರಾಜ್ಯದಲ್ಲಿಯೇ ಮೊಟ್ಟ ಮೊದಲಿಗೆ 2019-20ನೇ ಸಾಲಿನಲ್ಲಿ ದೈಹಿಕ ಶಿಕ್ಷಕರು ಹಾಗೂ ವಿಕಲಚೇತನ ನೌಕರರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, ಇದು ಎರಡನೇ ಬಾರಿಗೆ ಕೊಪ್ಪಳದಲ್ಲಿ ವಿಶೇಷ ಕ್ರೀಡಾಕೂಟ ಹಮ್ಮಿಕೊಂಡಿರುವುದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಈ ಕ್ರೀಡೆಯಲ್ಲಿ ಉತ್ಸಾಹದಿಂದ ದೈಹಿಕ ಶಿಕ್ಷಕರು ಹಾಗೂ ವಿಕಲಚೇತನ ನೌಕರರು ಭಾಗವಹಿಸಿದ್ದಾರೆ ಎಂದರು.
ಪ್ಯಾರಾ ಒಲಂಪಿಕ್ ನಲ್ಲಿ ವಿಕಲಚೇತನ ನೌಕರರು ಭಾಗವಹಿಸಿ ಪ್ರಶಸ್ತಿ ಪಡೆದಿರುವುದು ಅತ್ಯಂತ ಸಂತೋಷದ ವಿಶೇಷವಾಗಿದೆ. ಇವರಂತೆ ಜಿಲ್ಲೆಯ ಜಿಲ್ಲಾಡಳಿತ ವಿಶೇಷ ಚೇತನ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ ಎಂದರು.
ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪಅಂಡಗಿ ಚಿಲವಾಡಗಿ ಮಾತನಾಡಿ, ವಿಕಲಚೇತನ ನೌಕರರು ಕೂಡಾ ಸರ್ಕಾರಿ ನೌಕರರಾಗಿದ್ದು, ಸರ್ಕಾರಿ ನೌಕರರಿಗೆ ಆಯೋಜನೆ ಮಾಡುವ ಕ್ರೀಡಾಕೂಟದಲ್ಲಿ ವಿಕಲಚೇತನರಿಗೆ ಅವರ ಅಂಗವಿಕಲತೆಗೆ ಅನುಗುಣವಾಗಿ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಅನೇಕ ಭಾರಿ ಒತ್ತಾಯ ಮಾಡಲಾಗಿತ್ತು. ಇದರಿಂದಾಗಿ ನಮ್ಮ ಜಿಲ್ಲೆಯಲ್ಲಿ ಎರಡನೇಯ ಭಾರಿ ಕ್ರೀಡಾಕೂಟವನ್ನು ಆಯೋಜನೆ ಮಾಡಿದ್ದಾರೆ. ಆದರೆ ಉಳಿದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನ ನೌಕರರು ಕ್ರೀಡೆ ಎಂಬ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಕ್ರೀಡೆಯನ್ನು ಆಯೋಜನೆ ಮಾಡಬೇಕು. ಅನುಕಂಪ ಬೇಡಾ ಅವಕಾಶ ಬೇಕು ಎಂಬುದು ಕೇವಲ ಹೇಳಿಕೆ ಮಾತ್ರ ಸಿಮೀತವಾಗದೇ, ಅದು ಕಾರ್ಯರೂಪಕ್ಕೆ ಬರಬೇಕಾದರೆ ಇಂತಹ ವೇದಿಕೆಗಳ ಅವಶ್ಯವಿದೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ಜಿಲಾ ್ಲಖಜಾಂಚಿ ಸುಶೀಲೇಂದ್ರ ದೇಶಪಾಂಡೆ, ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ, ಗೌರವಾಧ್ಯಕ್ಷರಾದ ಮುಸ್ತಾಪ ಕುದರಿಮೋತಿ, ಕಾರ್ಯಾಧ್ಯಕ್ಷರಾದ ಶಿವಪ್ಪ ಜೋಗಿ, ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ಬೋಳರಡ್ಡಿ, ದೈಹಿಕ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ವೀರಭದ್ರಯ್ಯಾ ಪೂಜಾರ, ಕಾರ್ಯದರ್ಶಿ ಶರಣಬಸವ ಬಂಡಿಹಾಳ, ತಾಲೂಕ ಅಧ್ಯಕ್ಷ ವಿರುಪಾಕ್ಷಪ್ಪ ಬಾಗೋಡಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ.ಎ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಉದಯಕುಮಾರ, ವಿಕಲಚೇತನ ನೌಕರರ ಸಂಘದ ಕೊಪ್ಪಳ ತಾಲೂಕು ಅಧ್ಯಕ್ಷ ಅಂದಪ್ಪ ಇದ್ಲಿ, ಯಲಬುರ್ಗಾ ತಾಲೂಕು ಅಧ್ಯಕ್ಷ ಮಹೇಶ ಆರೇರ, ಕುಷ್ಟಗಿ ತಾಲೂಕು ಅಧ್ಯಕ್ಷ ಸಿದ್ದರಾಮಪ್ಪ ಅಮರಾವತಿ, ಕುಕನೂರ ತಾಲೂಕು ಅಧ್ಯಕ್ಷ ಲಾಲಾಭಾಷಾ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಠ್ಠಲ್ ಬೈಲವಾಡ ಮಾತನಾಡಿದರು. ಶಿಕ್ಷಕ ಮಹೆಬೂಸಾಬ ಮಠದ ಸ್ವಾಗತಿಸಿದರು. ಸಿ.ಆರ್.ಪಿ.ಹನುಮಂತಪ್ಪಕುರಿ ನಿರೂಪಿಸಿದರು. ವಿಕಲಚೇತನ ನೌಕರರ ಸಂಘದ ಜಿಲ್ಲಾ ಖಜಾಂಚಿ ಕಾಶಿನಾಥ ಶಿರೀಗೇರಿ ವಂದಿಸಿದರು.

Please follow and like us:
error