ಅಕ್ಟೋಬರ್. ೦೭ ರಂದು ರಾಯಚೂರಿನಲ್ಲಿ ಪತ್ರಕರ್ತರಿಗೆ ವೃತ್ತಿ ತರಬೇತಿ ಕಾರ್ಯಾಗಾರ

: ಕರ್ನಾಟಕ ಮಾಧ್ಯಮ ಅಕಾಡೆಮಿ, ರಾಯಚೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಕರ್ತರಿಗೆ ವೃತ್ತಿ ತರಬೇತಿ ಕಾರ್ಯಾಗಾರವನ್ನು ಅಕ್ಟೋಬರ್. ೦೭ ರಂದು ಬೆಳಿಗ್ಗೆ, ೧೦-೩೦ ಗಂಟೆಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ಎಲ್ಲಾ ಪತ್ರಕರ್ತರು ಭಾಗವಹಿಸಬಹುದು. ಈ ತರಬೇತಿ ಶಿಬಿರಕ್ಕೆ ಆಗಮಿಸುವ ಪತ್ರಕರ್ತರಿಗೆ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಮಾಡಲಾಗಿದ್ದು, ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ಎಲ್ಲಾ ಪತ್ರಕರ್ತರು ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಎಂ. ಸಿದ್ದರಾಜು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.