ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಮಕ್ಕಳ ರಕ್ಷಣೆಗೆ ಮುಂದಾಗಬೇಕು : ಡಾ.ಅಂಟೋನಿ ಸೆಬಾಸ್ಟಿಯನ್


ಕೊಪ್ಪಳ,   ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬAಧಿಸಿದAತೆ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಅಂಟೋನಿ ಸೆಬಾಸ್ಟಿಯನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುನಿಸೆಫ್, ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ)ಕಾಯ್ದೆ-2015, ಪೊಕ್ಸೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಆರ್.ಟಿ.ಇ ಕಾಯ್ದೆ-2009 ಕುರಿತು ಜಿಲ್ಲೆಯ ಎಲ್ಲಾ ಭಾಗೀದಾರರೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಯ ಹೊಣೆಯಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಘಟಕದೊಂದಿಗೆ ಜಿಲ್ಲಾ ಪೊಲೀಸ್ ಇಲಾಖೆ, ನಗರ ಸ್ಥಳಿಯ ಸಂಸ್ಥೆಗಳು ಸೇರಿದಂತೆ ಇತರೆ ಇಲಾಖೆಗಳು ಪರಸ್ಪರ ಸಮನ್ವಯತೆಯನ್ನು ಕಾಯ್ದುಕೊಳ್ಳಬೇಕು. ಇದರಿಂದ ಬಾಲ ಕಾರ್ಮಿಕರನ್ನು, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಸಂತ್ರಸ್ತರನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಬಾಲ್ಯ ವಿವಾಹ ನಡೆದಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆದ ನಂತರ ಬಾಲಕ ಅಥವಾ ಬಾಲಕಿಯರ ಚಟುವಟಿಕೆಗಳನ್ನು ಗಮನಿಸಿ ಅವರ ಬಗ್ಗೆ ಕಾಳಜಿ ವಹಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 101 ಬಾಲ್ಯವಿವಾಹ ಪ್ರಕರಣಗಳು ಕಂಡುಬAದಿದ್ದು, ಇವುಗಳಲ್ಲಿ 10 ಪ್ರಕರಣಗಳಲ್ಲಿ ಮಾತ್ರ ಎಫ್‌ಐಆರ್ ದಾಖಲಾಗಿದೆ. ಉಳಿದ ಪ್ರಕರಣಗಳ ಕುರಿತು ಕೈಗೊಂಡ ಕ್ರಮಗಳೇನು ಎಂದು ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು. ಬಾಲ್ಯವಿವಾಹವನ್ನು ರಾಜ್ಯದಿಂದ ಮುಕ್ತಗೊಳಿಸಲು ಜಿಲ್ಲಾ ಮಟ್ಟದಲ್ಲಿ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಭೆ ಜರುಗಿಸಿ ಕಿರು ಚಿತ್ರ, ಬಿತ್ತಿಪತ್ರಗಳ ಮೂಲಕ ಬಾಲ್ಯ ವಿವಾಹದ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಬಾಲ್ಯ ವಿವಾಹ ಸಂದರ್ಭದಲ್ಲಿ ಬಾಲಕಿಯ ವಯಸ್ಸಿನ ಕುರಿತು ಶಾಲಾ ಮುಖ್ಯಸ್ಥರಿಂದ ದೃಢೀಕರಣ ಪ್ರಮಾಣ ಪತ್ರ ಪಡೆದು, ಪ್ರಕರಣ ಸಾಬೀತಾದಲ್ಲಿ ಬಾಲ್ಯ ವಿವಾಹದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಎಲ್ಲ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಾದ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಜಿಲ್ಲೆಯ ಹಾಲವರ್ತಿ ಮತ್ತು ಚಿಲವಾಡಗಿ ಗ್ರಾಮಗಳ ಶಾಲೆಗಳಿಗೆ ಭೇಟಿ ನೀಡಿದಾಗ ಅಲ್ಲಿನ ಅವ್ಯವಸ್ಥೆಯಲ್ಲಿ ಮಕ್ಕಳು ಹೇಗೆ ಶಿಕ್ಷಣ ಕಲಿಯುತ್ತಾರೆ ಎನ್ನುವುದಕ್ಕಿಂತ ಮಕ್ಕಳು ಶಾಲೆಗೆ ಹೇಗೆ ಬರುತ್ತಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿತ್ತು. ಶುಚಿತ್ವ, ಕುಡಿಯುವ ನೀರಿನ ಸೌಲಭ್ಯದಂತಹ ಮೂಲಭೂತ ಅವಶ್ಯಕತೆಗಳೂ ಶಾಲೆಯಲ್ಲಿ ಇಲ್ಲ. ಅಲ್ಲದೆ ಮಕ್ಕಳನ್ನು ಯಾವುದೇ ಕಾರಣಕ್ಕೂ ಶಿಕ್ಷಿಸುವುದು ಅಥವಾ ಶಿಕ್ಷಿಸಲು ಯಾವುದೇ ವಸ್ತುಗಳನ್ನು ಬಳಸುವುದು ಅಪರಾಧ ಎಂದು ತಿಳಿದಿದ್ದರೂ ಶಾಲೆಯಲ್ಲಿ ಮಕ್ಕಳನ್ನು ಶಿಕ್ಷಿಸಲು ಕೋಲು ಇಟ್ಟಿರುವುದು ಕಂಡುಬAದಿತು. ಮಕ್ಕಳಿಗೆ ಸರ್ಕಾರದಿಂದ ನೀಡಬೇಕಾದ ಸಮವಸ್ತç, ಶೂ, ಸಾಕ್ಸ್ಗಳ ಸಮರ್ಪಕ ವಿತರಣೆ ಆಗದಿರುವುದೂ ಕಂಡುಬAದಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದು ಅವರು ಸಊಚನೆ ನೀಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟಾಗಿ ಪಾಲಿಸಬೇಕು. ಭಿಕ್ಷಾಟನೆಯಲ್ಲಿ ತೊಡಗಿದ ಮಕ್ಕಳನ್ನು ಹಾಗೂ ಬಾಲಕಾರ್ಮಿಕ ಮಕ್ಕಳನ್ನು ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಿದ ಮೇಲೆ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅವರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಬಾಲ ಕಾರ್ಮಿಕರನ್ನು ಹಾಗೂ ನಾಪತ್ತೆಯಾದ ಮಕ್ಕಳು ಪತ್ತೆಯಾದ ನಂತರ ಅವರ ಪೋಷಕರ ವಶಕ್ಕೆ ಒಪ್ಪಿಸುವ ಮುನ್ನ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಬೇಕು. ನಂತರವೇ ನಿಯಮಾನುಸಾರ ಮಕ್ಕಳನ್ನು ಪೋಷಕರ ವಶಕ್ಕೆ ಕೊಡಬೇಕು. ಮಕ್ಕಳು ನಾಪತ್ತೆಯಾದಾಗಿಂದ ಪತ್ತೆಯಾಗುವವರೆಗೂ ಹಾಗೂ ಬಾಲ ಕಾರ್ಮಿಕರ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ, ಮಕ್ಕಳಿಗೆ ಆಪ್ತ ಸಮಾಲೋಚನೆ ಮೂಲಕ ಧೈರ್ಯ ನೀಡಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗುವ ಮಹಿಳೆಯರಲ್ಲಿ 18 ರಿಂದ 19 ಎಂದು ವಯಸ್ಸು ನಮೂದಿಸುವ ಯುವತಿಯರನ್ನು ಗಂಭೀರವಾಗಿ ಪರಿಗಣಿಸಿ ಅವರ ನೈಜ ವಯಸ್ಸಿನ ಖಾತರಿಗಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. 18 ವಯಸ್ಸಿನ ಕೆಳಗಿನ ಯುವತಿಯರು ಗರ್ಭ ಧರಿಸುವುದರಿಂದ ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತವೆ ಎಂಬುದನ್ನು ತಿಳಿಸಬೇಕು. ಇದಕ್ಕೆ ಬಾಲ್ಯ ವಿವಾಹವೂ ಕಾರಣಾವಾಗುವುದರಿಂದ ವಯಸ್ಸಿನ ನಿಖರತೆ ಪರೀಕ್ಷಿಸುವ ಮೂಲಕ ಬಾಲ್ಯವಿವಾಹದ ಕುರಿತು ಮಾಹಿತಿಯನ್ನೂ ಸಂಗ್ರಹಿಸಬಹುದು. ಆದ್ದರಿಂದ ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲಾ ಆರ್‌ಸಿಎಚ್ ಪೋರ್ಟಲ್‌ನ್ನು ಪರಿಶೀಲಿಸಿ 18 ವಯಸ್ಸಿನ ಕೆಳಗಿನ ಯುವತಿಯರ ಹೆರಿಗೆ ಕುರಿತು ವಿವರಗಳನ್ನು ಸಂಗ್ರಹಿಸಬೇಕು ಹಾಗೂ ಈ ಕುರಿತು ಸಂಬAಧಿಸಿದ ಇಲಾಖೆ ಅಥವಾ ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಮಾಹಿತಿಯನ್ನು ನೀಡಬೇಕು ಎಂದು ಅವರು ಅಧಿಕಾರಿಗೆ ಸೂಚನೆ ನೀಡಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾವಾರು ಮಕ್ಕಳ ಮೇಲಾದ ದೌರ್ಜನ್ಯಗಳ ಕುರಿತು ಹಾಗೂ ಅಪ್ರಾಪ್ತ ಮಕ್ಕಳು ಗರ್ಭಿಣಿಯಾಗಿರುವ ಬಗ್ಗೆ ಮತ್ತು ಬಾಲಕಾರ್ಮಿಕ ಮಕ್ಕಳ ಕುರಿತು ಸಂಬAಧಿಸಿದ ಇಲಾಖೆಗಳ ವರದಿಯಲ್ಲಿನ ಅಂಕಿ ಅಂಶಗಳನ್ನು ಪರಿಶೀಲಿಸಿದ ಆಯೋಗದ ಅಧ್ಯಕ್ಷರು ಇಲಾಖೆಗಳು ನೀಡಿದ ಅಂಕಿ ಅಂಶಗಳು ಒಂದಕ್ಕೊAದು ತಾಳೆಯಾಗುತ್ತಿಲ್ಲ. ಇದನ್ನು ಗಮನಿಸಿದಾಗ ಇಲಾಖೆಗಳ ನಡುವೆ ಸಮನ್ವಯತೆಯ ಕೊರತೆಯಿರುವುದು ಕಂಡು ಬಂದಿದ್ದು, ಇದು ಮರುಕಳಿಸದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳನ್ನು ಅನುಷ್ಠಾನಗೊಳಿಸುವಲ್ಲಿ ಎಲ್ಲಾ ಇಲಾಖೆಗಳ ಜವಾಬ್ದಾರಿ ಪ್ರಮುಖವಾಗಿದ್ದು, ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸುವುದರೊಂದಿಗೆ ಮಕ್ಕಳ ವಿಷಯದಲ್ಲಿ ಅಪರಾಧ ಎಸಗಿದವರಿಗೆ ಎಚ್ಚರಿಕೆ ಮೂಡಿಸಬೇಕು ಎಂದು ಅವರು ಹೇಳಿದರು.
ಕೃಷಿ ಹೊಂಡ, ತೆರೆದ ಕೊಳವೆ ಬಾವಿಗಳಲ್ಲಿ ಮಕ್ಕಳು ಬಿದ್ದು ಸಾವನ್ನಪ್ಪುವ ಪ್ರಕರಣಗಳು ರಾಜ್ಯದ ಬೇರೆ ಭಾಗಗಳಲ್ಲಿ ಕಂಡು ಬಂದಿವೆ. ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ದಾಖಲಾಗದಿರುವುದು ಸಮಾಧಾನದ ಸಂಗತಿ. ಆದರೆ ಕೆಲ ವರ್ಷಗಳ ಹಿಂದೆ ಕಲ್ಲು ಕ್ವಾರಿಗಳಲ್ಲಿ, ಗ್ರಾನೈಟ್ ಗುಂಡಿಗಳಲ್ಲಿ ಮಕ್ಕಳು ಬಿದ್ದು ಮರಣ ಹೊಂದಿದ ಪ್ರಕರಣಗಳು ಇವೆ. ಅದರಂತೆ ನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯುತ್ ಆಘಾತದಿಂದ ಮಕ್ಕಳು ಮರಣ ಹೊಂದಿದರು. ಆದ್ದರಿಂದ ಶಾಲಾ-ಕಾಲೇಜು, ಮಕ್ಕಳ ವಸತಿ ನಿಲಯಗಳ ಮೇಲೆ ವಿದ್ಯುತ್ ತಂತಿ ಹಾಯ್ದು ಹೋಗದಂತೆ ಕ್ರಮ ಕೈಗೊಳ್ಳಿ. ಜಿಲ್ಲೆಯಲ್ಲಿ ನಿಷ್ಕಿçಯೆಗೊಂಡ ತೆರೆದ ಕೊಳವೆ ಬಾವಿಗಳನ್ನು ಮುಚ್ಚುವಂತೆ ಮಾಲೀಕರಿಗೆ ಸೂಚನೆ ನೀಡಿ ಮಕ್ಕಳ ಜೀವ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಎಚ್ಚರಿಕೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವು ವಿದ್ಯಾರ್ಥಿ ವೇತನ, ಪ್ರೋತ್ಸಾಹಧನಗಳನ್ನು ನೀಡಲು ವಿದ್ಯಾರ್ಥಿಗಳು ಖಾಲಿ ಚೆಕ್ಕುಗಳನ್ನು ಸಲ್ಲಿಸುವಂತೆ ಒತ್ತಡ ಹೇರುತ್ತಿರುವ ಕುರಿತು ಜಿಲ್ಲೆಯ ಕೆಲ ಕಾಲೇಜು ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಈ ಕುರಿತು ಸಮಾಜ ಕಲ್ಯಾಣಾಧಿಕಾರಿಗಳು ಸಂಬAಧಿಸಿದ ಕಾಲೇಜುಗಳಿಗೆ ಸೂಕ್ತ ನಿರ್ದೇಶನ ನೀಡಿ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಟಿ.ಶ್ರೀನಿವಾಸ ಮಾತನಾಡಿ, ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು, ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ಮಕ್ಕಳನ್ನು ರಕ್ಷಿಸಿದ ನಂತರ ಸಂಬAಧಿಸಿದ ಸಮಿತಿ ಮುಂದೆ ಮಕ್ಕಳನ್ನು ಹಾಜರು ಪಡಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಂಬAಧಿಸಿದ ಮಾಹಿತಿಯನ್ನು ಆಗಿಂದಾಗ್ಗೆ ಒದಗಿಸಬೇಕು. ಮಕ್ಕಳ ರಕ್ಷಣೆ ಕುರಿತು ಇರುವ ವಿವಿಧ ಸಮಿತಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಆವರೆಗಿನ ಪ್ರಗತಿಯನ್ನು ಸಭೆಯ ಮುಂದೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಎಚ್‌ಐವಿ ಬಾಧಿತ ಯುವಕ/ಯುವತಿಯರಿಗೆ ಅವರದೇ ಸಮುದಾಯದಲ್ಲಿ ಸೂಕ್ತ ಜೋಡಿಯನ್ನು ಹುಡುಕಿ ಮದುವೆ ಮಾಡಿಸುವ ಸಂಘ ಸಂಸ್ಥೆಗಳ ಮೂಲಕ ಜಿಲ್ಲಾಡಳಿತ ಕೈಜೋಡಿಸಿದ್ದು, ಎಚ್‌ಐವಿ ಬಾಧಿತ ಹಾಗೂ ಸೋಂಕಿತರರಿಗೂ ಸಹಜ ಜೀವನ ಕಲ್ಪಿಸಿಕೊಡುವ ಪ್ರಯತ್ನ ಮಾಡಲಾಗುತ್ತಿದೆ. ಹಾಗೆಯೇ ಇಲಾಖೆಗಳಿಂದ ಸೋಂಕಿತರಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಬಾಲ ಕಾರ್ಮಿಕ ಪದ್ಧತಿಯಲ್ಲಿ ಬಾಲ ಕಾರ್ಮಿಕರ ಪೋಷಕರಿಗೆ ಉದ್ಯೋಗ ಒದಗಿಸಿ ಮಕ್ಕಳನ್ನು ರಕ್ಷಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಮತ್ತೊಮ್ಮೆ ಸಮೀಕ್ಷೆ, ಭೇಟಿ ನಡೆಸಿ ನೈಜ ಬಾಲ ಕಾರ್ಮಿಕರನ್ನು ಗುರುತಿಸಿ ಅವರಿಗೆ ಅಗತ್ಯ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಶಾಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅವಕಾಶವಿದ್ದು, ಈ ಬಗ್ಗೆ ಶಾಲೆಗಳ ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಪುನರ್ವಸತಿ ಕೇಂದ್ರಗಳು, ದತ್ತು ಪಾಲನಾ ಸಂಸ್ಥೆಗಳಲ್ಲಿ ನಿಯಮಾನುಸಾರ ವ್ಯವಸ್ಥಿತ ಕಟ್ಟಡ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಮಕ್ಕಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆಗಳು ಆರಂಭವಾಗಿದ್ದು, ಬೇರೆ ಊರುಗಳಿಗೆ ವಿದ್ಯಾಭ್ಯಾಸಕ್ಕೆಂದು ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈಗಾಗಲೇ ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಅದರಂತೆ ವಿದ್ಯಾರ್ಥಿಗಳ ಶಾಲೆ ಮತ್ತು ಹತ್ತಿರದ ನಿಲ್ದಾಣಗಳಿಗೆ ಶಾಲಾ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ತಲುಪುವಂತೆ ಸಾರಿಗೆ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಂಗನವಾಡಿ ಮಕ್ಕಳಿಗೆ ಮೊರಿಂಗಾ ಪೌಡರ್‌ನ್ನು ನೀಡುವ ಮೂಲಕ ಪೌಷ್ಠಿಕ ಆಹಾರ ಒದಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಮಕ್ಕಳನ್ನು ಶಾಲೆಗಳಿಗೆ ಒಂದನೇ ತರಗತಿಗೆ ದಾಖಲಿಸುವಾಗ ಮಗುವಿನ ಜನನ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಆಸ್ಪತ್ರೆಗಳಲ್ಲಿ ಹೆರಿಗೆಯಾದರೆ ಆ ಮಗುವಿನ ಜನನ ಪ್ರಮಾಣ ಪತ್ರವನ್ನು ಸಂಬAಧಿಸಿದ ಸಂಸ್ಥೆಗೆ ಒದಗಿಸುವುದು ಆಸ್ಪತ್ರೆಯ ಜವಾಬ್ದಾರಿ. ಆದರೆ ಮನೆಯಲ್ಲಿಯೇ ಆಗುವ ಹೆರಿಗೆಗಳಲ್ಲಿ ಮಗುವಿನ ಜನನ ಪ್ರಮಾಣ ಪತ್ರವನ್ನು ಆಯಾ ಗ್ರಾಮ ಪಂಚಾಯತಗಳ ಮೂಲಕ ಪಡೆದುಕೊಳ್ಳಬೇಕು. ಜನನ ಪ್ರಮಾಣ ಪತ್ರ ಪಡೆಯಲು ಆಶಾ ಕಾರ್ಯಕರ್ತೆಯರು ಪೋಷಕರಿಗೆ ಸಹಾಯ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ ಮಾತನಾಡಿ, ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳು, ಮಕ್ಕಳ ನಾಪತ್ತೆ ಪ್ರಕರಣಗಳು, ಅವಘಡಗಳಿಂದ ಉಂಟಾದ ಮಕ್ಕಳ ಸಾವಿನ ಕುರಿತ ಮಾಹಿತಿಯನ್ನು ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಮಾತನಾಡಿ, ಇಲಾಖೆಯಿಂದ ಇದುವರೆಗೂ ತಡೆದ ಬಾಲ್ಯ ವಿವಾಹಗಳು, ಪಾಲನಾ ಸಂಸ್ಥೆಗಳು, ದತ್ತು ಪಾಲನ ಸಂಸ್ಥೆಗಳು ಮುಂತಾದವುಗಳ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಶೋಕ.ಜಿ.ಯರಗಟ್ಟಿ. ಡಿ.ಶಂಕರಪ್ಪ, ಎಮ್.ಎಲ್. ಪರಶುರಾಮ, ಎಚ್.ಸಿ.ರಾಘವೇಂದ್ರ, ಭಾರತಿ ಮಲ್ಲೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಡಿಎಚ್‌ಒ ಡಾ. ಅಲಕನಂದಾ ಡಿ. ಮಳಗಿ, ಯುನಿಸೆಫ್‌ನ ಜಿಲ್ಲಾ ಸಂಯೋಜಕರಾದ ಹರೀಶ್ ಜೋಗಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ನಿಲೋಫರ್ ರಾಂಪೂರಿ, ಸಮಿತಿ ಸದಸ್ಯರಾದ ಸರೋಜಾ ಬಾಕಳೆ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ದತ್ತು ಪಾಲನಾ ಸಂಸ್ಥೆಗಳ ಪ್ರತಿನಿಧಿಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥ್ಥಿತರಿದ್ದರು.
ಅಹವಾಲುಗಳ ಪರಿಶೀಲನೆ:
ಸಭೆಯ ನಂತರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಅಂಟೋನಿ ಸೆಬಾಸ್ಟಿಯನ್ ಅವರು ಕನಕಗಿರಿ ತಾಲ್ಲೂಕಿನ ಸೋಮಸಾಗರ ವ್ಯಾಪ್ತಿಯ ಶಾಲಾ ಬಾಲಕಿಯು ಅತಿಥಿ ಶಿಕ್ಷಕರ ಕಿರುಕುಳದಿಂದ ಶಾಲೆ ಬಿಟ್ಟ ಬಗ್ಗೆ, ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮಗುವಿಗೆ ದೈಹಿಕ ಹಿಂಸೆ ನೀಡಿರುವ ಬಗ್ಗೆ ಹಾಗೂ ಗಂಗಾವತಿ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Please follow and like us:
error