ಕೊಪ್ಪಳ, ಜೂ. ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಅಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ 2020-21 ನೇ ಸಾಲಿನ ಆಚಿiÀÄವ್ಯಯದಲ್ಲಿ ಸರ್ಕಾರ ರೂ. 20 ಕೋಟಿಗಳ ಅನುದಾನ ಘೋಷಿಸಿದ್ದು, ಇದನ್ನು ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಮತ್ತು ದೇವಾಲಯದ ಅಭಿವೃದ್ಧಿಗಾಗಿ ಬಳಸಲು ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತು Z್ಪರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ಅನುದಾನ ನೀಡಲಾಗಿದ್ದು, ಆ ಇಲಾಖೆಯ ಮೂಲಕ ಅಂಜನಾದ್ರಿ ಬೆಟ್ಟದಲ್ಲಿ ಭಕ್ತಾದಿಗಳು ಹಾಗೂ ಯಾತ್ರಾತ್ರಿಗಳ ಅನುಕೂಲಕ್ಕಾಗಿ ರೋಪ್ವೇ ಸೌಲಭ್ಯ ಒದಗಿಸುವುದು, ಆಂಜನೇಯ ಸ್ವಾಮಿ ದೇವಸ್ಥಾನದ ಪ್ರದಕ್ಷಿಣೆ ರಸ್ತೆಗಳನ್ನು ನಿರ್ಮಾಣ ಮಾಡುವುದು, ಅಂಜನಾದ್ರಿ ಬೆಟ್ಟದ ಮುಂಭಾಗಕ್ಕೆ ಹೊಂದಿಕೊAಡAತೆ ಅಂದಾಜು ಆರು ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳುವುದು, ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಮಾಡುವ ಕುರಿತು, ಪಂಪಾ ಸರೋವರದ ಅಭಿವೃದ್ಧಿ, ಅಂಜನಾದ್ರಿ ಬೆಟ್ಟದ ಹತ್ತಿರ ಯಾತ್ರಿ ನಿವಾಸದ ನಿರ್ಮಾಣ ಮಾಡಲು ಯೋಜಿಸಲಾಗಿದೆ. ರೋಪ್ ವೇ ನಿರ್ಮಾಣದ ಖರ್ಚು ವೆಚ್ಚದ ಕುರಿತು ಒಂದು ವಾರದೊಳಗೆ ಅಂದಾಜು ವೆಚ್ಚದ ಪಟ್ಟಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗೆ ಸೂಚಿಸಿದರು.
ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ದೇವಸ್ಥಾನದ ಮೂಲ ವಿನ್ಯಾಸಕ್ಕೆ ಧಕ್ಕೆ ಬರದಂತೆ ವಿನ್ಯಾಸ ರೂಪಿಸಬೇಕು. ಪ್ರದಕ್ಷಿಣೆ ರಸ್ತೆ ನಿರ್ಮಾಣದ ಜೊತೆಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರಿಣತರಿಂದ ಸೂಕ್ತ ನಕ್ಷೆ ತಯಾರಿಸಿ ಆ ಪ್ರಕಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕನಕರೆಡ್ಡಿ ನಾರಾಯಣರೆಡ್ಡಿ, ನಿರ್ಮಿತಿ ಕೆಂದ್ರದ ಶಶೀಧರ ಪಾಟೀಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ನಾಡಗೀರ, ಹವಾಮಾದ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
ಅನುದಾನವನ್ನು ಸಮರ್ಪಕವಾಗಿ ಬಳಸಲು ಕ್ರಿಯಾಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿ: ಪಿ. ಸುನೀಲ್ ಕುಮಾರ್
Please follow and like us: