ಅಪ್ರಾಪ್ತ ಬಾಲಕಿಯ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಶಿಕ್ಷೆ

ಕೊಪ್ಪಳ,  : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಹನುಮನಳ್ಳಿ ಗ್ರಾಮದ ಶ್ರೀನಾಥ ಭೋವಿ ಎಂಬ ವ್ಯಕ್ತಿಯ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಪೋಲಿಸ ಠಾಣೆ ವ್ಯಾಪ್ತಿಯ ಹನುಮನಳ್ಳಿ ಗ್ರಾಮದ ಶ್ರೀನಾಥ ಭೋವಿ ಎಂಬ ಆರೋಪಿಯು ಹನುಮನಳ್ಳಿ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಪರಿಚಯ ಮಾಡಿಕೊಂಡು ಪ್ರೀತಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ನಂತರ 2016ರ ಆಗಸ್ಟ್. 02 ರಂದು ರಾತ್ರಿ ವೇಳೆಯಲ್ಲಿ ಅವಳಿಗೆ ಪುಸಲಾಯಿಸಿ ಅಪಹರಣ ಮಾಡಿಕೊಂಡು ಮಂತ್ರಾಲಯಕ್ಕೆ ಹೋಗಿ ಅಲ್ಲಿ ಒಂದು ಲಾಡ್ಜ್ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವು ತನಿಖೆಯಲ್ಲಿ ಸಾಭಿತಾಗಿದ್ದರಿಂದ ಆರೋಪಿಯ ವಿರುದ್ಧ ಕೊಪ್ಪಳ ಸಿಪಿಐ ಭೀಮಣ್ಣ ಸೂರಿ ಅವರು ದೋಷಾರೋಪಣೆ ಸಲ್ಲಿಸಿದ್ದರು.
ಈ ಪ್ರಕರಣದ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಶ್ರೀನಾಥ ಭೋವಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25 ಸಾವಿರಗಳ ದಂಡ ವಿಧಿಸಿ, ದಂಡದ ಮೊತ್ತದಲ್ಲಿ ರೂ. 20 ಸಾವಿರಗಳನ್ನು ಬಾಧಿತಳಿಗೆ ನೀಡುವಂತೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ತೀರ್ಪು ಹೊರಡಿಸಿರುತ್ತಾರೆ.  ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು

Please follow and like us:
error