ಅಲ್ಪಸಂಖ್ಯಾತರಿಗೆ ಇರುವ ವಿವಿಧ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ : ಪಿ. ಸುನೀಲ್ ಕುಮಾರ್


ಕೊಪ್ಪಳ ಆ. : ವಿವಿಧ ಇಲಾಖೆಗಳ ಮೂಲಕ ಅಲ್ಪಸಂಖ್ಯಾತರಿಗೆ ನೀಡುವ ಹಲವು ಯೋಜನೆಯ ಸೌಲಭ್ಯಗಳ ಬಗ್ಗೆ ಸಮುದಾಯದವರಿಗೆ ಅರಿವು ಮೂಡಿಸಿ ಎಂದು ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನ ಜಿಲ್ಲಾ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು (ಆಗಸ್ಟ್.09) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಸಕ್ತ ಸಾಲಿನ 1ನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಸೌಲಭ್ಯ ಒದಗಿಸಲು ಅನುದಾನವನ್ನು ಮೀಸಲಿಡಲಾಗಿದೆ.  ಈ ಬಗ್ಗೆ ಸಮುದಾಯಕ್ಕೆ ಸರಿಯಾದ ಮಾಹಿತಿ ಇಲ್ಲ.  ಈ ನಿಟ್ಟಿನಲ್ಲಿ ವಿವಿಧ ಇಲಾಖೆಯಡಿ ನೀಡುವ ಸೌಲಭ್ಯಗಳ ಕುರಿತು ಅಲ್ಪಸಂಖ್ಯಾತರಿಗೆ ಮಾಹಿತಿ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.  ಅಲ್ಲದೇ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನ ಜಿಲ್ಲಾ ಸ್ಥಾಯಿ ಸಮಿತಿಯ ನಾಮನಿರ್ದೇಶಿತ ಸದಸ್ಯರುಗಳು ಸಹ ಸಮುದಾಯಕ್ಕೆ ಮಾಹಿತಿ ನೀಡಿ ಯೋಜನೆಗಳ ಸದುಪಯೋಗಕ್ಕೆ ಶ್ರಮಿಸಬೇಕು.  ಭೂ ಒಡೆತನ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ಭೂರಹಿತ ಬಡ ಕುಟುಂಬಗಳಿಗೆ ಎರಡು ಎಕರೆ ಕೃಷಿ ಭೂಮಿಯನ್ನು ಪ್ರಥಮ ಬಾರಿಗೆ ಕೊಪ್ಪಳ ಜಿಲ್ಲೆಯಲ್ಲಿ ವಿತರಿಸಲಾಗಿದ್ದು ಹೆಮ್ಮೆಯ ವಿಷಯವಾಗಿದೆ.  ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ಬಾಕಿ ಉಳಿದ ಫಲಾನುಭವಿಗಳಿಗೂ ಸಹ ಸೌಲಭ್ಯ ಒದಗಿಸಬೇಕು.  ವಿವಿಧ ಇಲಾಖೆಗಳ ಮುಖಾಂತರ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲೆಗೆ ಒದಗಿಸಲಾದ ಅನುದಾನದಲ್ಲಿ ಶೇ.15 ರಷ್ಟನ್ನು ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟ ಅನುದಾನವನ್ನು ಅಲ್ಪಸಂಖ್ಯಾತರಿಗೆ ಇದರ ಸೌಲಭ್ಯ ಕಲ್ಪಿಸಬೇಕು.  2018-19ನೇ ಹಾಗೂ ಪ್ರಸಕ್ತ ಸಾಲಿನಲ್ಲಿ ತಮ್ಮ ಇಲಾಖೆಗಳಿಂದ ಅಲ್ಪಸಂಖ್ಯಾತರಿಗೆ ನೀಡಲಾಗಿರುವ ಸೌಲಭ್ಯಗಳ ವಿವರ ಹಾಗೂ ಅರ್ಹ ಫಲಾನುಭವಿಗಳ ಆಯ್ಕೆ ಪಟ್ಟಿಯ ವರದಿಯನ್ನು ಸಲ್ಲಿಸಬೇಕು.  ಇಲಾಖೆಯಿಂದ ಅಲ್ಪಸಂಖ್ಯಾತರಿಗೆ ಒದಗಿಸುವ ಯೋಜನೆ ಅಥವಾ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.  ಫಲಾನುಭವಿಗಳು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸದೇ ಇದ್ದಲ್ಲಿ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನದ ಜಿಲ್ಲಾ ಸ್ಥಾಯಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಪ್ರಿÃ ಮೆಟ್ರಿಕ್, ಪೋಸ್ಟ್ ಮೆಟ್ರಿಕ್, ಎಮ್.ಸಿ.ಎಮ್ ವಿದ್ಯಾರ್ಥಿ ವೇತನ, ವಿದ್ಯಾಸಿರಿ ವಿದ್ಯಾರ್ಥಿ ವೇತನ, ಡಿ.ಎಡ್ ಮತ್ತು ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿಶೇಷ ಪ್ರೊÃತ್ಸಾಹ ಧನ, ಕಾನೂನು ತರಬೇತಿ ಭತ್ಯೆ, ನರ್ಸಿಂಗ್ ತರಬೇತಿ ಭತ್ಯೆ ನೀಡಲು ಪ್ರಸಕ್ತ ಸಾಲಿನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ.  ಬಿದಾಯಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ 363 ಫಲಾನುಭವಿಗಳಿಗೆ (ಹೆಣ್ಣು ಮಕ್ಕಳಿಗೆ) ತಲಾ ರೂ. 50 ಸಾವಿರದಂತೆ  ಒಟ್ಟು 181.50 ಲಕ್ಷ ಹಾಗೂ ಪ್ರಸಕ್ತ ಸಾಲಿನ 1ನೇ ತ್ರೆöÊಮಾಸಿಕ ಅಂತ್ಯಕ್ಕೆ ರೂ. 40 ಲಕ್ಷ ಅನುದಾನವನ್ನು 80 ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ.  ಮುಸ್ಲಿಂ ಅಭಿವೃದ್ಧಿ ಯೋಜನೆಯಡಿ 2018-19ನೇ ಸಾಲಿನಲ್ಲಿ 05 ಮುಸ್ಲಿಂ ಶಾದಿ ಮಹಲ್ ಕಟ್ಟಡ ನಿರ್ಮಾಣಕ್ಕೆ ಒಟ್ಟು ರೂ. 83.50 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನದಲ್ಲಿ 63.50 ಲಕ್ಷ ಖರ್ಚು ಭರಿಸಲಾಗಿದೆ.  ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ.  ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಸಮುದಾಯ ಭವನ, ಚರ್ಚ್ ದುರಸ್ತಿ, ಕಂಪೌಂಡ ಗೋಡೆ, ಸ್ಮಶಾನ ಕಂಪೌಡ್ ಗೋಡೆ ನಿರ್ಮಾಣಕ್ಕೆ ಜಿಲ್ಲೆಯಲ್ಲಿ ಒಟ್ಟು 14 ಸಂಸ್ಥೆಗಳಿಗೆ ರೂ. 249.555 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.  ಈ ಎಲ್ಲಾ ಅನುದಾನ ಪಾವತಿಸಲಾಗಿದೆ.  ಜೈನ್ ಅಭಿವೃದ್ಧಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಎರಡು ಸಂಸ್ಥೆಗಳಿಗೆ ಒಟ್ಟು ರೂ. 65 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ 23 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಈ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ.  ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ದೊರಕದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿಯಲ್ಲಿ 150 ವಿದ್ಯಾರ್ಥಿಗಳಿಗೆ ಒಟ್ಟು ರೂ. 18 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.  ಕಾನೂನು ತರಬೇತಿ ಭತ್ಯೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮೂರು ಅಭ್ಯರ್ಥಿಗಳಿಗೆ ತಿಂಗಳಿಗೆ ತಲಾ ರೂ. 5000 ದಂತೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶೋಭಾ ಬಾಗೇವಾಡಿ, ಸಮಿತಿಯ ನಾಮ ನಿರ್ದೆÃಶಿತ ಸದಸ್ಯರಾದ ಅಮಜದ್ ಪಟೇಲ್ ಹಾಗೂ ಸಿರಾಜುದ್ದಿನ ಕರಮುಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error