You are here
Home > Koppal News > ಅ. ೧೭ ರಂದು ಕೊಪ್ಪಳದಲ್ಲಿ ೨ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಅ. ೧೭ ರಂದು ಕೊಪ್ಪಳದಲ್ಲಿ ೨ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ೨ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಅ. ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಕಿನ್ನಾಳ ರಸ್ತೆಯ ಪ್ರಗತಿ ನಗರದ ಸರಕಾರಿ ಜಿಲ್ಲಾ ಆಯುರ್ವೇದ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸುವರು. 

ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯ್ಕ ಪಾಲ್ಗೊಳ್ಳುವರು.  ಬೆಂಗಳೂರು ಆಯುಷ್ ನಿರ್ದೇಶನಾಲಯದ ನಿರ್ದೇಶಕರಾದ ಡಾ. ರತನ್ ಕೇಲ್ಕರ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು .

Top