You are here
Home > Koppal News > ಅ. ೨೪ ರಂದು ಕೊಪ್ಪಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಅ. ೨೪ ರಂದು ಕೊಪ್ಪಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ


ಕೊಪ್ಪಳ ಅ. : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅ. ೨೪ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.
ಕಾರ್ಯಕ್ರಮದ ಅಂಗವಾಗಿ ಧಾರವಾಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ ಡಿ. ಡೊಳ್ಳಿನ್ ಅವರು ಮಹರ್ಷಿ ವಾಲ್ಮೀಕಿರವರ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Top