ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದವರ ವಿರುದ್ಧ ಕ್ರಮ

ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು :ಪಿ. ಸುನೀಲ್ ಕುಮಾರ್
ಕೊಪ್ಪಳ ಅ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ದುರ್ಬಲ ವರ್ಗದ ಕುಟುಂಬಗಳಿಗೆ ನೀಡಲಾಗುವ ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಸುಳ್ಳು ಮಾಃಇತಿ ನೀಡಿ ಪಡೆದುಕೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಒಂದು ಕೆಜಿ ಅಕ್ಕಿಗೆ ಸುಮಾರು ರೂ. 35/- ರಂತೆ ಸರ್ಕಾರ ಪಾವತಿಸಿ ದುರ್ಬಲ ಕುಟುಂಬಗಳಿಗೆ ನೀಡುತ್ತಿರುವ ಈ ಯೋಜನೆಯ ಲಾಭವನ್ನು ಕೆಲವು ಸದೃಢರು ಸುಳ್ಳು ಮತ್ತು ತಪÅ್ಪ ಮಾಹಿತಿ ನೀಡಿ ಪಡೆದಿರುವುದು ವಿಷಾಧನೀಯವಾಗಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.  ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಪಡೆದುಕೊಂಡಿರುವ ಸದೃಢರು ಅಕ್ಟೊÃಬರ್. 15 ರೊಳಗಾಗಿ ಪಡಿತರ ಚೀಟಿಗಳನ್ನು ಕಚೇರಿಗೆ ಹಿಂದಿರುಗಿಸಲು ಸೂಚಿಸಿದೆ. ಇಲ್ಲವಾದರೆ ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆ ಮಾಡಿ, ಯಾವಾಗಿನಿಂದ ಎಷ್ಟು ಅಕ್ಕಿಯನ್ನು ಪಡೆದಿದ್ದಾರೆ ಎಂಬುದನ್ನು ಲೆಕ್ಕ ಮಾಡಿ ಮುಕ್ತ ಮಾರುಕಟ್ಟೆ ದರದಂತೆ ದಂಡ ವಸೂಲಿ ಮಾಡುವುದರ ಜೊತೆಗೆ ಅಂತಹವರ ವಿರುದ್ಧ ಕರ್ನಾಟಕ ಅನಧಿಕೃತ ಪಡಿತರ ಚೀಟಿಗಳನ್ನು ತಡೆಗಟ್ಟುವ ಆದೇಶ-1977 ರನ್ವಯ ಕ್ರಮ ಜರುಗಿಸಲಾಗುವುದು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

Please follow and like us:
error