ಆನೆಗೊಂದಿ ಉತ್ಸವಕ್ಕೆ ಜ. 10 ರಂದು ಖ್ಯಾತ ನಟ ಯಶ್ ಆಗಮನ


ಕೊಪ್ಪಳ ಜ.: ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಉತ್ಸವ-2020ರ ಅಂಗವಾಗಿ ಜ. 10 ರಂದು ಖ್ಯಾತ ಚಲನಚಿತ್ರ ನಟ ಯಶ್ ಅವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಆನೆಗೊಂದಿ ಉತ್ಸವ ಸಮಿತಿ ಅಧ್ಯಕ್ಷ ಪಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಆನೆಗೊಂದಿ ಉತ್ಸವದ ನಿಮಿತ್ತ ಜ. 10 ರಂದು ರಾತ್ರಿ 09-30 ಗಂಟೆಗೆ ಖ್ಯಾತ ಚಲನಚಿತ್ರ ನಟ ಯಶ್ ಹಾಗೂ ಅವರ ತಂಡದವರಿAದ ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆನೆಗೊಂದಿ ಉತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ತಿಳಿಸಿದೆ.

Please follow and like us:
error