ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಆರಂಭ


ಕೊಪ್ಪಳ,  : ಜಿಲ್ಲೆಯಾದ್ಯಂತ ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್‌ಗಳ ಲಭ್ಯತೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಆರಂಭಿಸಲಾಗಿದೆ.
ಸಹಾಯವಾಣಿಯು ದಿನದ 24 ಗಂಟೆಗಳಲ್ಲೂ(24/7) ಕಾರ್ಯನಿರ್ವಹಿಸಲಿದ್ದು, ದೂ.ಸಂ: 08539-225113 ಗೆ ಕರೆ ಮಾಡಿ ಸಾರ್ವಜನಿಕರು ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್‌ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು  ತಿಳಿಸಿದ್ದಾರೆ.

Please follow and like us:
error