fbpx

ಇಂದು ಒಂದೇ ದಿನ ಜಿಲ್ಲೆಯಲ್ಲಿ 44 ಪಾಜಿಟಿವ್ ಪ್ರಕರಣಗಳು : ಓರ್ವ ವೃದ್ದೆ ಸಾವು

Koppal :  ಕೊಪ್ಪಳ ಜಿಲ್ಲೆಯಲ್ಲಿ ಇಂದು ಕರೋನಾ ತನ್ನ  ಅಟ್ಟಹಾಸ ಮೆರೆದಿದೆ. ಒಂದೇ ದಿನ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಗಣಳು ದಾಖಲಾಗಿವೆ. ಇವತ್ತು  ಒಂದೇ ದಿನ ಒಟ್ಟು 44 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 210ಕ್ಕೇ ಏರಿಕೆಯಾಗಿದೆ.  ನಿನ್ನೆಯಷ್ಟೇ ಅಸ್ಪತ್ರೆಗೆ ದಾಖಲಾಗಿದ್ದ ಕಾರಟಗಿಯ 60 ವರ್ಷದ ವೃದ್ದೆ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಕರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ  ಸಂಖ್ಯೆ ೬ಕ್ಕೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಲ್ಲಿ ನಾಲ್ಕು ಜನ ಸಾವಿಗೀಡಾಗಿದ್ದಾರೆ.  ಇಂದು ಗುಣಮುಖರಾದ ೧೧ ಜ‌ನ ಆಸ್ಪತ್ರೆಯಿಂದ ಬಿಡುಗಡೆ  ಮಾಡಲಾಗಿದೆ. ಇದುವರೆಗೆ  ಒಟ್ಟು ಗುಣಮುಖರಾಗಿ ಬಿಡುಗಡೆಯಾದವರು ೯೮ ಜನ .  ೧೦೬ ಜನರು ಈಗ ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

Please follow and like us:
error
error: Content is protected !!