ಉದ್ಯೋಗ ಮೇಳಕ್ಕೆ ಸಚಿವ ಅನಂತಕುಮಾರ್ ಹೆಗ್ಡೆ

ಅ. ೨೮-೨೯ರಂದು ಕೊಪ್ಪಳದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ | ಪಾಲ್ಗೊಳ್ಳಲು ಸಚಿವ ಹೆಗ್ಡೆ ಒಪ್ಪಿಗೆ

ಕೊಪ್ಪಳ: ನಿರುದ್ಯೋಗಿಗಳಿಗೆ ಸ್ಥಳೀಯ ಹಾಗೂ ಕಾರ್ಪೊರೇಟ್ ಕಂಪನಿಗಳಲ್ಲಿ ಉತ್ತಮ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಅಕ್ಟೋಬರ್ ೨೮ ಮತ್ತು ೨೯ರಂದು ಕೊಪ್ಪಳದಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಉದ್ಯಮಶೀಲತೆ ಹಾಗೂ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ ಹೆಗ್ಡೆ ಅವರಿಗೆ ನವದೆಹಲಿಯಲ್ಲಿ ಆಹ್ವಾನ ನೀಡಲಾಯಿತು.
ಮೇಳವನ್ನು ಉದ್ಘಾಟಿಸುವಂತೆ ಕೋರಿ ಸಂಸದ ಸಂಗಣ್ಣ ಕರಡಿ ನೇತೃತ್ವದ ನಿಯೋಗ ಸಲ್ಲಿಸಿದ ಮನವಿ ಸ್ವೀಕರಿಸಿದ ಸಚಿವ ಅನಂತಕುಮಾರ ಹೆಗ್ಡೆ, ಆಹ್ವಾನವನ್ನು ಒಪ್ಪಿಕೊಂಡರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೌಶಲ್ಯ ಅಭಿವೃದ್ಧಿ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಈ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಕೊಪ್ಪಳ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಉದ್ಯೋಗದ ಅವಕಾಶಗಳನ್ನು ತಂದುಕೊಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.
ಸುಮಾರು ೧೦೦ಕ್ಕೂ ಹೆಚ್ಚು ಸ್ಥಳೀಯ ಹಾಗೂ ಕಾರ್ಪೊರೇಟ್ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ವದ ಕ್ರಮಗಳು ಹಾಗೂ ಲಭ್ಯವಿರುವ ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕೂ ಇದು ವೇದಿಕೆಯಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ವಿವರಿಸಿದರು.
ಮಿಲೇನಿಯಂ ಪಬ್ಲಿಕ್ ಸ್ಕೂಲ್‌ನ ಮುಖ್ಯಸ್ಥ ಗಿರೀಶ್ ಕಣವಿ ಸೇರಿದಂತೆ ಇತರರು ನಿಯೋಗದಲ್ಲಿದ್ದರು.

Please follow and like us:
error