ಉದ್ಯೋಗ ವಾಹಿನಿ ರಥಕ್ಕೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಚಾಲನೆ

ಕೊಪ್ಪಳ  : ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಗ್ರಾಮ ಪಂಚಾಯತಿಯ ಮುದ್ದಾಬಳ್ಳಿ ಗ್ರಾಮದಲ್ಲಿ ಮಂಗಳವಾರದAದು ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರು ಗುಳೆ ಹೋಗದಂತೆ ತಡೆಯಲು ಸ್ಥಳೀಯವಾಗಿ ದೊರೆಯುವ ಕೆಲಸದ ಕುರಿತು ಉದ್ಯೋಗ ಮಾಹಿತಿಯುಳ್ಳ ರಥಕ್ಕೆ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮುಖ್ಯಮಂತ್ರಿಗಳ 21 ಅಂಶಗಳ ಕಾರ್ಯಕ್ರಮದಡಿಯಲ್ಲಿ ತಾಲೂಕಿನಲ್ಲಿ 38 ಗ್ರಾಮ ಪಂಚಾಯತಿಗಳಲ್ಲಿ ವೈಯಕ್ತಿಕ ಅಥವಾ ಸಾಮುದಾಯಿಕ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸಬಹುದಾಗಿದ್ದು ಹತ್ತಿರದ ಗ್ರಾಮ ಪಂಚಾಯತಿಗೆ ಸಂಪರ್ಕಿಸಿ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಬಯಸಿ ಗ್ರಾಮ ಪಂಚಾಯತಿಗೆ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿ ಕೂಲಿ ಉದ್ಯೋಗ ಪಡೆಯಬಹುದು ಎಂದು ಹೇಳಿದರು.
ಪ್ರತಿ ದಿನಕ್ಕೆ ಕೂಲಿ ರೂ.275/- ನಿಗದಿಪಡಿಸಿದ್ದು ಮತ್ತು ಉಪಕರಣಗಳ ಬಳಕೆಗಾಗಿ(ಗುದ್ದಲಿ, ಸಲಿಕೆ ಹರಿತಕ್ಕಾಗಿ) ರೂ.10/- ಹೆಚ್ಚುವರಿಯಾಗಿ ಪಾವತಿಸಲು ಅವಕಾಶವಿದೆ. ಆದ್ದರಿಂದ ಗ್ರಾಮಸ್ಥರು ಯಾವುದೇ ಕಾರಣಕ್ಕೂ ಗುಳೆ ಹೊಗದೇ ಸ್ಥಳೀಯವಾಗಿ ಗ್ರಾಮ ಪಂಚಾಯತಿಗೆ ಸಂಪರ್ಕಿಸಿ ಸಾಮುದಾಯಿಕ ಕಾಮಗಾರಿಗಳಾದ ಕೆರೆ, ಚೆಕ್ ಡ್ಯಾಂ ಹೂಳೆತ್ತುವುದು, ಕೃಷಿಹೊಂಡ ನಿರ್ಮಾಣ ಮತ್ತು ಬದು ನಿರ್ಮಾಣ ಮುಂತಾದ ಕಾಮಗಾರಿಗಳಲ್ಲಿ ಕೂಲಿಕಾರರು ಭಾಗವಹಿಸಿ, ಕೆಲಸ ನಿರ್ವಹಿಸಿ ಕೂಲಿಯನ್ನು ತಮ್ಮ ಬ್ಯಾಂಕ್ ಖಾತೆಗೆ ಪಡೆದು ಆರ್ಥಿಕವಾಗಿ ಸದೃಢರಾಗಬಹುದು. ರೈತರು ತಮಗೆ ಜಮೀನು ಲಭ್ಯವಿಲ್ಲದೇ ಇದ್ದ ಪಕ್ಷದಲ್ಲಿ ವೈಯಕ್ತಿಕ ಕಾಮಗಾರಿಗಳಾದ ದನದದೊಡ್ಡಿ/ಕುರಿದೊಡ್ಡಿ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಅಧ್ಯಕ್ಷರಾದ ಬಾಲಚಂದ್ರನ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಬೀನಾ ಗೌಸ್, ಜಿಲ್ಲಾ ಪಂಚಾಯತ ಸದಸ್ಯರಾದ ಗೂಳಪ್ಪ ಹಲಗೇರಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಮಲ್ಲಿಕಾರ್ಜುನ, ಮುಖಂಡರಾದ ಕೃಷ್ಣಾರಡ್ಡಿ ಗಲಬಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೀಪಾ ಸೋಮಶೇಖರಯ್ಯ ಇನಾಮದಾರ, ಸಹಾಯಕ ನಿರ್ದೇಶಕರು(ಗ್ರಾಮೀಣ ಉದ್ಯೋಗ) ಸೌಮ್ಯ ಕೆ, ಗೊಂಡಬಾಳ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಲಕ್ಷಿö್ಮÃದೇವಿ ಛಲವಾದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Please follow and like us:
error