ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನವನ್ನು ಸಮರ್ಪಕ ಬಳಸಿ, ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸಿ : ಕೆ.ರಾಜಶೇಖರ ಹಿಟ್ನಾಳ್

ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ

ಕೊಪ್ಪಳ,  : ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಗಳಲ್ಲಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿ, ಫಲಾಣುಭವಿಗಳಿಗೆ ಯೋಜನೆಯ ಲಾಭ ತಲುಪಿಸಿ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಶನಿವಾರ (ನ.21) ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ಕಟ್ಟಡಗಳ ನಿರ್ಮಾಣ, ಸಾಲ ಸೌಲಭ್ಯ ಮುಂತಾದ ಯೋಜನೆಗಳಲ್ಲಿ ವಿವಿಧ ಇಲಾಖೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತದೆ. ಅನುದಾನ ಬಳಕೆ ಕುರಿತು ರಚಿಸಿದ ಕ್ರಿಯಾ ಯೋಜನೆ, ಫಲಾನುಭವಿಗಳ ಆಯ್ಕೆ ಕುರಿತು ಸಂಬAಧಿಸಿದ ಕ್ಷೇತ್ರದ ಜಿ.ಪಂ. ಸದಸ್ಯರಿಗೆ ಮಾಹಿತಿ ನೀಡಿ. ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಕಾಮಗಾರಿಗಳ ಅನುಷ್ಠಾನ ಸಂದರ್ಭದಲ್ಲಿ ಸದಸ್ಯರನ್ನು ಆಹ್ವಾನಿಸಿ, ಅವರಿಗೆ ಸಂಪೂರ್ಣ ಮಾಹಿತಿ ನೀಡಿ. ಒಂದು ವೇಳೆ ಯಾವುದೇ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಅನುಷ್ಠಾನ ಸ್ಥಗಿತಗೊಂಡಲ್ಲಿ ಅಥವಾ ವಿಳಂಬವಾದಲ್ಲಿ ಆ ಬಗ್ಗೆಯೂ ಮಾಹಿತಿ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ರಾಸುಗಳಿಗೆ ಅಗತ್ಯವಾದ ಔಷಧ, ಲಸಿಕೆಗಳನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಚರ್ಮಗಂಟು ರೋಗದಿಂದ ಬಳಲುತ್ತಿರುವ ದನ-ಕರುಗಳಿಗೆ ಅಗತ್ಯ ಚಿಕಿತ್ಸೆ ನೀಡಿ ರೈತರಿಗೆ ಸಹಾಯ ಮಾಡಿ. ಸಾಕು ಪ್ರಾಣಿಗಳಿಗೆ ಸಂಬAಧಿಸಿದ ರೋಗಗಳ ಚಿಕಿತ್ಸೆಗೆ ಬೇಕಾದ ಲಸಿಕೆ, ಔಷಧಿಗಳ ದಾಸ್ತಾನು ಯಾವಾಗಲೂ ಲಭ್ಯವಿರುವಂತೆ ಕ್ರಮ ವಹಿಸಿ ಎಂದು ಅವರು ಪಶು ವೈದ್ಯಾಧಿಕಾರಿಗೆ ತಿಳಿಸಿದರು.
ಬೆಳೆ ವಿಮೆ ಯೋಜನೆಯಲ್ಲಿ ಇದುವರೆಗೂ 3543 ರೈತರು ನೋಂದಣಿ ಮಾಡಿಕೊಂಡಿದ್ದು, ಡಿಸೆಂಬರ್ ಅಂತ್ಯದವರೆಗೂ ನೋಂದಣಿಗೆ ಕಾಲವಕಾಶವಿರುವುದರಿಂದ ಬೆಳೆ ವಿಮೆ ಕುರಿತು ರೈತರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಬೆಳೆ ವಿಮೆ, ಹವಾಮಾನ ವೈಪರೀತ್ಯದಿಂದಾದ ಬೆಳೆ ನಾಶದ ಪರಿಹಾರವನ್ನು ರೈತರಿಗೆ ತಲುಪಿಸಲು ಅಧಿಕಾರಿಗಳು ನಿರ್ಲಕ್ಷö್ಯ ಮಾಡುವಂತಿಲ್ಲ. ಯಾವುದೇ ರೈತರಿಗೆ ಸರ್ಕಾರದ ಯೋಜನೆಗಳ ಸಂಪೂರ್ಣ ಲಾಭ ಸಿಗಬೇಕು. ಆದ್ದರಿಂದ ಅಧಿಕಾರಿಗಳು ಹೆಚ್ಚಿನ ಗಮನ ವಹಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಅವರು ಕೃಷಿ ಅಧಿಕಾರಿಗಳಿಗೆ ಹೇಳಿದರು.
ಸರ್ಕಾರ ರೇಷ್ಮೆ ಶೆಡ್ ನಿರ್ಮಾಣ, ಈರುಳ್ಳಿ ಶೆಡ್ ನಿರ್ಮಾಣಕ್ಕೆ ಸಹಾಯಧನ ನೀಡುವಂತೆ ದನ ಕರುಗಳ ಶೆಡ್ ನಿರ್ಮಾಣಕ್ಕೆ ಯೋಜನೆಗಳಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ನಡಲಾಗುವ ಸಸಿಗಳು. ನೆಡುತೋಪುಗಳ ಕುರಿತು, ಸದ್ಯ ಉಳಿದಿರುವ ಸಸಿಗಳ ಸಂಖ್ಯೆ, ಇದುವರೆಗೂ ನೆಡಲಾದ ಸಸಿಗಳ ಸಂಖ್ಯೆ, ಒಟ್ಟು ಪ್ರದೇಶದ ಕುರಿತು ಮೂರು ವರ್ಷಗಳ ಮಾಹಿತಿಯನ್ನು ನೀಡಬೇಕು. ನರೇಗಾ ಯೋಜನೆಯಡಿ ಸಸಿ ನೆಡುವ ಕಾಮಗಾರಿಗೆ ಬರುವ ಕೂಲಿಕಾರರೊಂದಿಗೆ ಅಧಿಕಾರಿಗಳು ಮಾನವೀಯತೆಯಿಂದ ವರ್ತಿಸಬೇಕು. ಯಾವುದೇ ಅಧಿಕಾರಿ ಅವಮಾನಕರ ಪದ ಬಳಸಿ ಕೂಲಿಕಾರರನ್ನು ನಿಂದಿಸುವAತಿಲ್ಲ ಹಾಗೂ ಸರಿಯಾದ ಸಮಯಕ್ಕೆ ಅವರಿಗೆ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಅರಣ್ಯ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಜೆಸ್ಕಾಂ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಿದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಬೇಕು. ಹೊಲಗಳಲ್ಲಿರುವ ಅಪಾಯ ತಂದೊಡ್ಡುವ ವಿದ್ಯುತ್ ಕಂಬ, ವಿದ್ಯುತ್ ಪರಿವರ್ತಕ(ಟಿ.ಸಿ), ಮನೆಗಳು, ವಸತಿ ನಿಲಯಗಳು, ಜನವಸತಿ ಕಟ್ಟಡಗಳ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ಲೈನ್‌ಗಳನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ಹಾಳಾದ ರಸ್ತೆಗಳ ದುರಸ್ಥಿಗೆ ಲೋಕೋಪಯೋಗಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸ್ಥಳ ಪರಿಶೀಲನೆ ಮಾಡಿ ದುರಸ್ಥಿಗೆ ಬೇಕಾದ ಒಟ್ಟು ಅನುದಾನವನ್ನು ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅವರು ಸಂಬAಧಿಸಿದ ಇಲಾಖೆ ಅಧಿಕಾರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 64 ಸಕ್ರಿಯ ಕೊರಾನಾ ಪ್ರಕರಣಗಳಿದ್ದು, ಕೋವಿಡ್-19 ನಿರ್ವಹಣೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಉತ್ತಮ ಕಾರ್ಯ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ದೇಶದಾದ್ಯಂತ ಕೊರೊನಾ ಎರಡನೇ ಅಲೆ ಶುರುವಾಗುವ ಆತಂಕವಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಕೋವಿಡ್-19 ನಿಯಮಗಳನ್ನು ಪಾಲಿಸಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದ ಅವರು ಇದೇ ಸಂದರ್ಭ ಆರೋಗ್ಯ ಇಲಾಖೆ ಹಾಗೂ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಶ್ಲಾಘಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯಾ ಕಾರ್ಯನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಜಲಜೀವನ್ ಮಿಷನ್ ಹಾಗೂ ಅಂಗನವಾಡಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು. ಜಲ ಜೀವನ ಮಿಷನ್ ಯೋಜನೆಯು ಮನೆ ಮನೆಗೆ ಗಂಗೆ ಎಂಬ ಯೋನೆಯಾಗಿದ್ದು, ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ನೀರನ್ನು ಒದಗಿಸುವ ಯೋಜನೆಯಾಗಿದೆ. ಜಿಲ್ಲೆಯಲ್ಲಿ ಲಭ್ಯವಿರುವ ನದಿ, ಕಾಲುವೆಗಳ ಮೂಲಕ ನೀರಿನ ಸಂಪರ್ಕ ಪಡೆದು ಪ್ರತಿ ಮನೆಗೂ ತಲುಪಿಸಬೇಕು. ನೀರಿನ ಮೂಲಗಳಿಲ್ಲದ ಪ್ರದೇಶಗಳಲ್ಲಿ ಓವರ್ ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಿ ಅಲ್ಲಿಂದ ಗ್ರಾಮದ ಜನರಿಗೆ ನೀರು ಒದಗಿಸಬೇಕು. 2023 ರೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದ್ದು, ಇದಕ್ಕೆ ಸಂಬAಧಿಸಿದAತೆ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಬಹುತೇಕ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಅಂತಹ ಕಡೆಗಳಲ್ಲಿ ಸ್ವಂತ ಕಟ್ಟಡ ಒದಗಿಸಲು ಕ್ರಮ ಕಯಗೊಳ್ಳಲಾಗುವುದು. ಹಾಗೆಯೇ ಅಂಗನವಾಡಿಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಬಹುತೇಕ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಘಟಕಗಳು ಇದುವರೆಗೂ ಕಾರ್ಯಾರಂಭ ಮಾಡಿಲ್ಲ. ಈ ಕುರಿತು ಪ್ರಶ್ನೆ ಮಾಡಿದರೆ ಸಂಬAಧಿಸಿದ ಇಲಾಖೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡುವುದಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಜಿ.ಪಂ. ಸದಸ್ಯರು, ಈ ಕೂಡಲೇ ಸ್ಥಳ ಪರಿಶೀಲನೆಗೆ ತೆರಳುವಂತೆ ಅಧ್ಯಕ್ಷರನ್ನು ಒತ್ತಾಯಿಸಿದರು.
ಈ ವಿಷಯಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಗ್ರಾಮೀಣ ಕುಡಿಯುವ ನೀರು ಇಲಾಖೆಗೆ ಸಂಬAಧಿಸಿದAತೆ ಸಂಪೂರ್ಣ ಪರಿಶೀಲನೆಗಾಗಿ ಒಂದು ಪ್ರತ್ಯೇಕ ಸಭೆಯನ್ನು ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷರಾದ ಬೀನಾ ಗೌಸ್, ಜಿ.ಪಂ. ಉಪ ಕಾರ್ಯದರ್ಶಿ ಶರಣಬಸವರಾಜ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರು, ಜಿ.ಪಂ.ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(ಫೋಟೋ ಕಳುಹಿಸಿದೆ)

Please follow and like us:
error