ಏ.27 ರಿಂದ ಮೇ 12 ರವರೆಗೆ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯ : ವಿಕಾಸ್ ಕಿಶೋರ್ ಸುರಳ್ಕರ್

Kannadanet ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಸಿ.ಆರ್.ಪಿ.ಸಿ 1973 ರ ಕಲಂ 144 ರಡಿಯಲ್ಲಿ ಜಿಲ್ಲೆಯಾದ್ಯಂತ ಏಪ್ರಿಲ್ 27 ರ ರಾತ್ರಿ 09 ಗಂಟೆಯಿAದ ಮೇ 12 ರ ಬೆಳಿಗ್ಗೆ 06 ಗಂಟೆಯವರೆಗೆ ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು. ನಿಷೇಧಾಜ್ಞೆಯು ಎದ್ದು ಕಾಣುವಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸುವ ಮೂಲಕ ಮತ್ತು ಧ್ವನಿವರ್ಧಕ ಬಳಸಿ ಪ್ರಚಾರ ಮಾಡಲು ಹಾಗೂ ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
error