ಕನಿಷ್ಠ ಬೆಂಬಲ ಬೆಲೆ : ಭತ್ತ ಖರೀದಿಗೆ ಗರಿಷ್ಠ ಪ್ರಮಾಣ ನಿಗದಿ


ಕೊಪ್ಪಳ,  : 2020-21 ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಿಸಲಾಗಿದ್ದು, ಅದರಂತೆ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್‌ನAತೆ ಗರಿಷ್ಠ 75 ಕ್ವಿಂಟಾಲ್ ಮೀರದಂತೆ ಖರೀದಿಸಲು ಸರ್ಕಾರ ಪರಿಷ್ಕೃತ ಆದೇಶವನ್ನು ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಿಳಿಸಿದ್ದಾರೆ.
ಈ ಹಿಂದೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 16 ಕ್ವಿಂಟಾಲ್‌ನAತೆ, ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಬೆಂಬಲ ಬೆಲೆಯನ್ನು ಸಾಮಾನ್ಯ ಭತ್ತಕ್ಕೆ ರೂ.1868 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ.1888 ಗಳನ್ನು ಮೊದಲಿನ ಆದೇಶದಂತೆ ನಿಗದಿಪಡಿಸಲಾಗಿದೆ.
ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಕೊಪ್ಪಳ, ಗಂಗಾವತಿ, ಕಾರಟಗಿ, ಶ್ರೀರಾಮನಗರ ಹಾಗೂ ಸಿದ್ದಾಪುರಗಳಲ್ಲಿ 5 ಭತ್ತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಆಸಕ್ತ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error