ಕೊಪ್ಪಳ ಃ ಕನ್ನಡ, ನಾಡು, ನುಡಿ, ನೆಲ, ಜಲ, ಸಂಸ್ಕೃತಿ ರಕ್ಷಣೆಗಾಗಿ ಮತ್ತು ಕನ್ನಡ ಸಾಹಿತ್ಯದ ಏಳಿಗೆಗಾಗಿ ಕಂಕಣಬದ್ಧರಾಗಿರುವ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಪ್ರಬಲ ಅಭ್ಯರ್ಥಿ ಹನುಮಂತಪ್ಪ ಅಂಡಗಿ ಚಿಲವಾಡಗಿಯವರಿಗೆ ಮತ ನೀಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾದ ಸೋಮಲಿಂಗಪ್ಪ ಬೆಣ್ಣಿ ಹೇಳಿದರು.
ಅವರು ಕೊಪ್ಪಳ ತಾಲೂಕಿನ ಲಿಂಗದಳ್ಳಿಯಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಪ್ರಬಲ ಅಭ್ಯರ್ಥಿ ಹನುಮಂತಪ್ಪ ಅಂಡಗಿ ಚಿಲವಾಡಗಿಯವರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದರು.
ಅವರು ಮುಂದುವರೆದು ಮಾತನಾಡುತ್ತಾ ಹನುಮಂತಪ್ಪ ಅಂಡಗಿ ಚಿಲವಾಡಗಿಯವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೃಷಿಯನ್ನು ಮಾಡಿದ್ದಾರೆ. ಯುವ ಸಾಹಿತಿಗಳನ್ನು ಗುರುತಿಸಿ ಅವರಿಗೆ ವೇದಿಕೆಗಳನ್ನು ಕಲ್ಪಿಸುವ ಮೂಲಕ ಅವರ ಪ್ರತಿಭೆ ತಕ್ಕ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಇಂತವರು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು ಎಂದರು.
ಲಿಂಗದಳ್ಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾದ ದೇವರಾಜ ಮೇಟಿ ಮಾತನಾಡುತ್ತಾ, ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಗಳು ನಿರಂತವಾಗಿ ನಡೆಯಬೇಕಾದರೆ ಹನುಮಂತಪ್ಪ ಅಂಡಗಿಯವರಂತಹ ಕ್ರಿಯಾಶೀಲ ಹಾಗೂ ಸೃಜನಶೀಲ ಸಾಹಿತಿಗಳು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು ಎಂದರು.
ಶಹಪುರದ ಶಿಕ್ಷಕರು ಮತ್ತು ಚಲಚಿತ್ರ ನಿರ್ದೇಶಕರಾದ ಮಂಜುನಾಥ ಪೂಜಾರವರು ಮಾತನಾಡುತ್ತಾ, ಹನುಮಂತಪ್ಪ ಅಂಡಗಿ ಚಿಲವಾಡಗಿಯವರು ಶುದ್ಧ ಸಾಹಿತ್ಯವನ್ನು ಪ್ರೀತಿಸುವ ಸಾಹಿತ್ಯ ಪ್ರೇಮಿಗಳು. ಇವರು ಸಾಹಿತ್ಯದ ಆರಾಧಕರು. ಇವರು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಾಗಿದ್ದಾರೆ. ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದರೆ ಆ ಸ್ಥಾನಕ್ಕೊಂದು ಮೆರಗು ಬರುತ್ತದೆ ಎಂದರು. ಸಾಹಿತ್ಯ ಪ್ರೇಮಿಯಾದ ಸರದಾರ ಅಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error