ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಂಡಗಿ ಮನವಿ

 

ಕೊಪ್ಪಳ:  ಮಹಾಮಾರಿ ಕರೋನಾಗೆ ಕಡಿವಾಣ ಹಾಕುವ ಸಂಬಂಧ  ಪ್ರಧಾನ ಮಂತ್ರಿಗಳಾದ   ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಲಹೆ ಸೂಚನೆ ನೀಡಿದ ದಿನವೇ ಭಾರತ ದೇಶದಲ್ಲಿ ನಿನ್ನೆ ಒಂದೇ ದಿನ ೩೫,೮೭೧ ಹೊಸ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ನಿನ್ನ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದ ಕನಕಗಿರಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾವಿರಾರು ಜನರು ಸೇರಿದ್ದರೂ ಸಹಿತ ಅಲ್ಲಿ ಭಾಗವಹಿಸಿದವರಾರೂ ಸಾಮಾಜಿಕ ಅಂತರ ಕಾಪಾಡಿರಲಿಲ್ಲ ಮತ್ತು ಮಾಸ್ಕ್ ಧರಿಸಿರಲಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಸಮ್ಮೇಳನಗಳಿಂದ ಕೊರೋನಾ ಹರಡುವ ಸಾಧ್ಯತೆಗಳಿವೆ.

ಇದೇ ಮಾರ್ಚ ೨೭ ರಂದು ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾದಲ್ಲಿ ೧೩ನೇ ತಾಲೂಕಾ ಕನ್ನಡ ಸಮ್ಮೇಳನವನ್ನು ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲು ಜಿಲ್ಲಾ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ನಿರ್ಧರಿಸಿದ್ದಾರೆ. ಆದ್ದರಿಂದ ಮುಂದಿನ ದಿನಮಾನಗಳಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ರದ್ದುಗೊಳಿಸಬೇಕೆಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಮಾನ್ಯ ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಅವರಿಗೆ  ಮನವಿ ಸಲ್ಲಿಸಿದರು.

Please follow and like us:
error