ಕರೋನಾ ವೈರಸ್ ಬಗ್ಗೆ ಆತಂಕಬೇಡ : ಪಿ.ಸುನೀಲ್‍ಕುಮಾರ್

ಕೊಪ್ಪಳ ಮಾ. : ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕರೋನಾ ವೈರಸ್ ಪೀಡಿತ ಪ್ರಕರಣಗಳು ಪತ್ತೆಯಾಗಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಈ ಬಗ್ಗೆ ಆತಂಕಗೊಳ್ಳಬಾರದು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕರೋನಾ ಪೀಡಿತ ದೇಶಗಳಿಂದ ಬರುವ ಸಾರ್ವಜನಿಕರ ಹಾಗೂ ಪ್ರವಾಸಿಗರ ವಿಷಯವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಣ್ಗಾವಲು ಸಮಿತಿ ಪ್ರತಿನಿತ್ಯ ವರದಿಗಳನ್ನು ಜಿಲ್ಲಾ ಸರ್ವೇಕ್ಷಣಾ ಘಟಕಕ್ಕೆ ನೀಡುತ್ತಿದೆ. ಅಂತಹ ಸಾರ್ವಜನಿಕ ಅಥವಾ ಪ್ರವಾಸಿಗರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ.   ಇತ್ತೀಚಿಗೆ ಕೊಪ್ಪಳ ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ಇರಾನ್ ದೇಶದಿಂದ ಬಂದಿರುವ ಸ್ಥಳೀಯ ನಾಗರಿಕರ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಲಾಗಿ ಆ ಕುಟುಂಬದ ಸದಸ್ಯರಿಗೆ ಯಾವುದೇ ರೀತಿಯ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವುದಿಲ್ಲ. ಆದರೂ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮೂರು ಪದರಿನ ಹೆಚ್ಚಿನ ಸುರಕ್ಷತೆ ಹೊಂದಿದ (N-95
Triple layer) ಮಾಸ್ಕ್‍ಗಳನ್ನು ನೀಡಲಾಗಿದೆ. ಪ್ರತಿ ನಿತ್ಯ ಅವರ ಆರೋಗ್ಯ ಸ್ಥಿತಿಗತಿಗಳ ಪರಿಶೀಲನೆ ಮಾಡಲಾಗುತ್ತಿದೆ. ಗ್ರಾಮದಲ್ಲಿ, ಶಾಲೆಗಳಲ್ಲಿ ಇದಕ್ಕೆ
ಸಂಬಂಧಿಸಿದಂತೆ ಆರೋಗ್ಯ ಶಿಕ್ಷಣ ಮಾಹಿತಿ ನೀಡಲಾಗಿದೆ. ಮುಂದಿನ 28 ದಿನಗಳವರೆಗೆ ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗುವುದು. ಹಾಗೂ ಈ ಕುರಿತು ಮುನ್ನೆಚ್ಚರಿಕೆಯಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಈಗಾಗಲೇ 5 ಹಾಸಿಗೆಗಲ ಪ್ರತ್ಯೇಕ ವಾರ್ಡ್‍ನ್ನು ತೆರೆಯಲಾಗಿದೆ. ಆದ್ದರಿಂದ ಗ್ರಾಮದ ನಾಗರಿಕರು ಭಯಭೀತರಾಗುವ ಅವಶ್ಯಕತೆಯಿಲ್ಲ.      ಜಿಲ್ಲೆಯ ನಾಗರಿಕರು ಸುಳ್ಳು ವದಂತಿಗಳಿಗೆ ಕಿವಿಗೊಡದೆ ಇರಲು ಕೋರಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಂಶಯಾಸ್ಪದ ರೋಗ ಲಕ್ಷಣಗಳಿರುವ ವ್ಯಕ್ತಿಗಳು ಕಂಡುಬಂದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಮೊ.ಸಂ. 9731414564 ಗೆ ಮಾಹಿತಿ ನೀಡಬಹುದು ಎಂದು
ಜಿಲ್ಲಾಧಿಕಾರಿ  ತಿಳಿಸಿದ್ದಾರೆ.

Please follow and like us:
error