fbpx

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ


ಕೊಪ್ಪಳ ಸೆ.   ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮಂಗಳವಾರದಂದು ಜಿಲ್ಲಾಡಳಿತ ಭವನದ ಆವಣರದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಶುಭಾಶಯಗಳನ್ನು ಕೋರಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಮಾತನಾಡಿ, 371(ಜೆ) ಲಾಭ ಈ ಭಾಗದ ಎಲ್ಲಾ ಜನರಿಗೆ ಸಿಗಬೇಕು.  ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಎಲ್ಲರೂ ಶ್ರಮೀಸಬೇಕು. ಪ್ರತಿ ವರ್ಷ ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ 100 ಕೋಟಿ ಅನುದಾನ ಬರುತ್ತದೆ.  ಅದರ ಲಾಭ ಈ ಭಾಗದ ಜನ ಸಾಮಾನ್ಯರಿಗೆ ತಲುಪಿದಾಗ ಮಾತ್ರ ಸರ್ಕಾರದ ಯೋಜನೆಗಳಿಗೆ ಮಹತ್ವ ಬರುತ್ತದೆ.  ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಕ ಕಲ್ಯಾಣಾಧಿಕಾರಿ ಡಾ. ರಾಜಕುಮಾರ್ ಯರಗಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಜಿ. ಸುರೇಶ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error
error: Content is protected !!