ಕಾಯಕ ಶರಣರ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

  1. ಕೊಪ್ಪಳ, : ಕಾಯಕ ಶರಣರ ಜಯಂತಿ ಅಂಗವಾಗಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾಯಕ ಶರಣರ ಜಯಂತಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
    ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಗಂಗಪ್ಪ, ಕುಕನೂರು ತಹಶೀಲ್ದಾರ್ ಕಿರಣ್ ಕುಮಾರ್, ಸಮಾಜದ ಮುಖಂಡರಾದ ಪ್ರಭುರಾಜ್ ಕಿಡದಾಳ, ಗಾಳೆಪ್ಪ ಹೂವಿನಾಳ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Please follow and like us:
error