ಕುಕನೂರು, ಮ್ಯಾನ್ಯುವಲ್ ಸ್ಕಾö್ಯವೆಂಜಿಗ್ : ನೇರ ಕೆಲಸ ಮಾಡಿಸುವವರ ವಿರುದ್ಧ ಕ್ರಮ

ಕೊಪ್ಪಳ,  : ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಯುಜಿಡಿ, ಮ್ಯಾನ್ಯುವಲ್, ಸೆಪ್ಟಿಕ್ ಟ್ಯಾಂಕ್‌ಗಳನ್ನು ಕೆಲಸಗಾರರಿಂದ ನೇರವಾಗಿ ಸ್ವಚ್ಛಗೊಳಿಸುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಸಿ ಮ್ಯಾನ್ಯುವಲ್ ಸ್ಕಾö್ಯವೆಂಜಿಗ್ ಕೆಲಸ ಮಾಡಿಸುವುದು ಕಂಡುಬAದಲ್ಲಿ ಅಂತವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಾನ್ಯುಯಲ್ ಸ್ಕಾö್ಯವೆಂರ‍್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013ರ ಪ್ರಕಾರ ಮ್ಯಾನ್ಯುವಲ್ ಸ್ಕಾö್ಯವೆಂಜರ್ ಪದ್ಧತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಷೇಧಿಸಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೆಪ್ಟಿಕ್ ಟ್ಯಾಂಕ್, ಯುಜಿಡಿ ಮ್ಯಾನ್ಯುವಲ್‌ಗಳನ್ನು ಕೇವಲ ಸಕ್ಕಿಂಗ್/ಜಟ್ಟಿAಗ್ ಯಂತ್ರಗಳ ಮೂಲಕ ಕಡ್ಡಾಯವಾಗಿ ಸ್ವಚ್ಛಗೊಳಿಸುವುದು ಹಾಗೂ ಸ್ವಚ್ಛಗೊಳಿಸಲು ಕೆಲಸಗಾರರನ್ನು ಬಳಸುವುದು ಕಾಯ್ದೆಯ ಪ್ರಕಾರ ಕ್ರಿಮಿನಲ್ ಅಪರಾಧವಾಗಿದೆ.
ಕಾನೂನು ಉಲ್ಲಂಘಸಿ ಮ್ಯಾನ್ಯುವಲ್ ಸ್ಕಾö್ಯವೆಂಜಿಗ್ ನೇರ ಕೆಲಸ ಮಾಡಿಸುವ ಕಾರಣರಾದವರು ಕುಕನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕಂಡುಬAದಲ್ಲಿ ಅವರ ವಿರುದ್ಧ ದಂಡ ವಿಧಿಸುವುದರ ಜೋತೆಗೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಕುಕನೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು   ತಿಳಿಸಿದ್ದಾರೆ.

Please follow and like us:
error