
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಎಲ್ಲಾ ಇಲಾಖೆಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಆತಂರಿಕ ದೂರು ಸಮಿತಿ ರಚಿಸಿ ದಾಖಲಾಗಿರುವ ದೂರುಗಳ ಕುರಿತು ವಿಚಾರಣೆ ನಡೆಸಿ, ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ತ್ರೆöÊಮಾಸಿಕ ವರದಿ ಸಲ್ಲಿಸಬೇಕಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಆಂತರಿಕ ಸಮಿತಿಗಳ ಸಭೆಯನ್ನು ನಡೆಸಿ ಪ್ರಕರಣಗಳ ವಿಚಾರಣೆ ಮತ್ತು ಬಾಕಿ ಇರುವ ಪ್ರಕರಣಗಳ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಕೋರಿದ್ದು, ಕೊಪ್ಪಳ ಜಿಲ್ಲೆಯ ವಿವಿಧ ಇಲಾಖೆಗಳು ಆಂತರಿಕ ದೂರು ಸಮಿತಿ ರಚಿಸುವ ಬಗ್ಗೆ ಹಾಗೂ ಸಮಿತಿ ಸದಸ್ಯರ ವಿವರ, ಸಮಿತಿ ಸಭೆ ಹಾಗೂ ವಿಲೇವಾರಿಗೆ ಬಾಕಿ ಇರುವ ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.
Please follow and like us: