ಕೊಪ್ಪಳದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Koppal ಕೊಪ್ಪಳದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು..ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ , ಗ್ಯಾಸ್, ಡಿಜೆಲ್, ಪೆಟ್ರೋಲ್ ಬೆಲೆ ಏರಿಕೆಯ ವಿರುದ್ದ ಕೊಪ್ಪಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಬನ್ನಿಕಟ್ಟಿಯ ಗೌರಿಶಂಕರ ಗುಡಿಯಿಂದ ಅಶೋಕ ಸರ್ಕಲ್ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರಕಾರದ ನೀತಿಗಳ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ,ಡಿಸಿಸಿ ಅಧ್ಯಕ್ಷ ಮಾಜಿ ಸಚಿವ ಶಿವರಾಜ್ ತಂಗಡಗಿ, ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ, ಇಂದಿರಾ ಭಾವಿಕಟ್ಟಿ, ಕಾಂಗ್ರೆಸ್ ಮುಖಂಡರಾದ ಗೂಳಪ್ಪ ಹಲಗೇರಿ, ಅಜೀಮ್ ಅತ್ತಾರ, ಕೃಷ್ಣ ಇಟ್ಟಂಗಿ, ಗವಿಸಿದ್ದಪ್ಪ ಚಿನ್ನೂರ, ಶಿವಕುಮಾರ್ ಶೆಟ್ಟರ್, ಗುರುರಾಜ್ ಹಲಗೇರಿ, ಕಾಟನ್ ಪಾಷಾ, ಅಮ್ಜದ್ ಪಟೇಲ್, ಕಿಶೋರಿ ಬೂದನೂರ, ಹನುಮಂತಪ್ಪ ಬೀಡನಾಳ, ಹನುಮೇಶ ಸೇರಿದಂತೆ ನಗರಸಭೆಯ ಸದಸ್ಯರು ಜಿಲ್ಲಾ ಪಂಚಾಯತ ಸದಸ್ಯರು ತಾಲೂಕು ಪಂ

ಚಾಯತ ಸದಸ್ಯರು ಗ್ರಾಮ ಪಂಚಾಯತ ಸದಸ್ಯರು ರೈತಾಪಿ ವರ್ಗದವರು ಕಾಂಗ್ರೇಸ್ ಪಕ್ಷದ ಮಖಂಡರು ಕಾರ್ಯಕರ್ತರು ಭಾಗವಹಿಸಿದ್ದರು

Please follow and like us:
error