ಕೊಪ್ಪಳದಲ್ಲಿ ಮತದಾನ ಜಾಗೃತಿಗೆ ಕ್ಯಾಂಡಲ್ ಅಭಿಯಾನ : ಪಿ ಸುನೀಲ್ ಕುಮಾರ್ ಅವರಿಂದ ಜಾಲನೆ

ಪ್ರತಿಜ್ಞಾವಿಧಿ ಸ್ವೀಕಾರ : ಮಾನವ ಸರಪಳಿ ನಿರ್ಮಾಣ

ಕೊಪ್ಪಳ ಮಾ.  ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕೊಪ್ಪಳದಲ್ಲಿ ವಿಶೇಷ ಕ್ಯಾಂಡಲ್ ಅಭಿಯಾನ, ಪ್ರತಿಜ್ಞಾವಿಧಿ ಸ್ವೀಕಾರ ಹಾಗೂ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಮತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸೋಮವಾರದಂದು ಕೊಪ್ಪಳ ನಗರದ ಸಾರ್ವಜನಿಕ ಮೈದಾನದಲ್ಲಿ ಹಾಗೂ ಅಶೋಕ ವೃತ್ತದಲ್ಲಿ ಬೃಹತ್ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೊಪಳ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಹಾಗೂ ಮತದಾನದ ಕುರಿತು ಪ್ರತಿಜ್ಞಾವಿಧಿಯನ್ನು ಭೋಧಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶೇಷ ಕ್ಯಾಂಡಲ್ ಅಭಿಯಾನವು ಸಾರ್ವಜನಿಕ ಮೈದಾನದಿಂದ ಪ್ರಾರಂಭಗೊಂಡು ತಾಲೂಕ ಪಂಚಾಯತ್, ತಹಶೀಲ್ದಾರ ಕಚೇರಿ ವೃತ್ತದ ಮಾರ್ಗವಾಗಿ ಅಶೋಕ ಸರ್ಕಲ್ ವರೆಗೆ ಸಾಗಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್, ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣವರ, ಜಿ.ಪಂ. ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ತಹಶೀಲ್ದಾರ ಜೆ.ಬಿ. ಮಜ್ಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಮಿತಾ ಯರಗೋಳಕರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ. ಕೃಷ್ಣಮೂರ್ತಿ, ಶಿಕ್ಷಣ ಇಲಾಖೆಯ ಉಮಾದೇವಿ ಸೊನ್ನದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂದು ಡಿ. ಎಲಿಗಾರ, ಜಿಲ್ಲಾ ಸ್ವೀಪ್ ಸಮಿತಿ ಸಂಯೋಜಕ
ಶ್ರೀನಿವಾಸ ಚಿತ್ರಗಾರ ಸೇರಿದಂತೆ ಕೊಪ್ಪಳ ಕ್ರೀಡಾ ವಸತಿ ಶಾಲೆಯ ವಿದ್ಯಾರ್ಥಿಗಳು, ಪೊಲೀಸ್, ಆರೋಗ್ಯ, ಶಿಕ್ಷಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು ಜಾಗೃತಿ ಜಾಥವನ್ನು ಯಶಸ್ವಿಗೊಳಿಸಿದರು.
ಜಾಥಾ ಉದ್ದಕ್ಕೂ “ನಮ್ಮ ಮತ ನಮ್ಮ ಹಕ್ಕು” ಎಲ್ಲ ಮತದಾರರೂ ಕಡ್ಡಾಯವಾಗಿ ಏಪ್ರೀಲ್. 23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮಾತದಾನ ಮಾಡುವಂತೆ ತಿಳಿಸಲಾಯಿತು. ನಂತರ ಅಶೋಕ ವೃತ್ತದಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಸಾರ್ವಜನಿಕರಿಗೆ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಕಲಾವಿದರು ಮತದಾನ ಜಾಗೃತಿ ಗೀತೆಗಳನ್ನು ಹಾಡುವುದರ ಮೂಲಕ ಮತದಾನ ಜಾಗೃತಿ ಮೂಡಿಸಿದರು.

Please follow and like us:
error