ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕೊಪ್ಪಳ ಮೇ.  : ಕರ್ನಾಟಕ ಸರ್ಕಾರದ ಕೃಷಿ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಮೇ.15 ಮತ್ತು 16 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬಿ.ಸಿ.ಪಾಟೀಲ್ ಅವರು ಮೇ.14 ರಂದು ಸಂಜೆ 5 ಗಂಟೆಗೆ ಬೆಂಗಳೂರಿನಿAದ ಕೊಪ್ಪಳಕ್ಕೆ ಪ್ರಯಾಣ ಮಾಡಿ ರಾತ್ರಿ 10:30 ಗಂಟೆಗೆ ಮುನಿರಾಬಾದ್ ತಲುಪಿ ವಾಸ್ತವ್ಯ ಮಾಡಲಿದ್ದಾರೆ. ಮೇ.15 ರಂದು ಬೆಳಗ್ಗೆ 9:00 ಗಂಟೆಗೆ ಮುನಿರಾಬಾದ್ ನಿಂದ ಕೊಪ್ಪಳಕ್ಕೆ ಆಗಮಿಸಿ ಬೆಳಗ್ಗೆ 9:30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿಯ ಪೂಜಾ ಕಾರ್ಯಕ್ರಮ ನೆರವೇರಿಸುವರು. ಬೆಳಗ್ಗೆ 10 ಗಂಟೆಗೆ ತೋಟಗಾರಿಕೆ ಇಲಾಖೆಯ ಕೊಪ್ಪಳ ಮಾವು ಶೀರ್ಷಿಕೆ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸುವರು. ಬೆ.11 ಗಂಟೆಗೆ ಜಿಲ್ಲೆಯ ಎಲ್ಲಾ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 6  ಗಂಟೆಗೆ ಕೊಪ್ಪಳದಿಂದ ಮುನಿರಾಬಾದ್‌ಗೆ ಪ್ರಯಾಣ ಮಾಡಿ ಸಂಜೆ 6:30 ಕ್ಕೆ ಮುನಿರಾಬಾದ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮೇ.16 ರಂದು ಬೆಳಗ್ಗೆ 9:30ಕ್ಕೆ ಮುನಿರಾಬಾದ್‌ನಿಂದ ಕೊಪ್ಪಳಕ್ಕೆ ಪ್ರಯಾಣಿಸುವರು. ಬೆ.10 ಗಂಟೆಗೆ ಉಸ್ತುವಾರಿ ಸಚಿವರ ಕೊಠಡಿಯಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ಹಿರೇಕೆರೂರು ಕಡೆಗೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಸಿ.ಎಲ್.ಶಿವಕುಮಾರ ತಿಳಿಸಿದ್ದಾರೆ.

ಮೇ.15 ರಂದು ಕೊಪ್ಪಳ ಮಾವು ಶೀರ್ಷಿಕೆ ಬಿಡುಗಡೆ ಸಮಾರಂಭ
ಕೊಪ್ಪಳ ಮೇ.  ಕೊಪ್ಪಳ ತೋಟಗಾರಿಕೆ ಇಲಾಖೆ(ಜಿಪಂ), ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮ(ನಿ.), ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಮಾವು ಶೀರ್ಷಿಕೆ ಬಿಡುಗಡೆ ಸಮಾರಂಭವನ್ನು ಇದೇ ಮೇ.15 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಎಚ್.ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ ಮತ್ತು ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಶಾಸಕರುಗಳಾದ ಬಸವರಾಜ ಪಾಟೀಲ್ ಇಟಗಿ, ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ. ಪಾಟೀಲ ಹಾಗೂ ಜಿಲ್ಲಾ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಶಿವಣ್ಣ ಮೂಲಿಮನಿ, ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಎಚ್.ವಿ.ವಿರುಪಾಕ್ಷಪ್ಪ, ಜಿಲ್ಲಾ ಹಾಫ್‌ಕಾಮ್ಸ್ನ ಅಧ್ಯಕ್ಷ ಯಂಕಣ್ಣ ಯರಾಶಿ ಆಗಮಿಸಲಿದ್ದಾರೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಎನ್, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಠಾರಿಯಾ, ಬೆಂಗಳೂರು ಲಾಲ್‌ಬಾಗ್‌ನ ತೋಟಗಾರಿಕೆ ಆಯುಕ್ತ ಬಿ.ವೆಂಕಟೇಶ, ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ.ಸಂಗೀತಾ, ಬೆಂಗಳೂರಿನ ತೋಟಗಾರಿಕೆ  ಅಪರ ನಿರ್ದೇಶಕ(ಹಣ್ಣುಗಳ ವಿಭಾಗ) ಕೆ.ಬಿ.ದುಂಡಿ, ಬಯೋಸೆಂಟರ್ ಮತ್ತು ಹುಳಿಮಾವು ತೋಟಗಾರಿಕೆ ಜಂಟಿ ನಿರ್ದೇಶಕ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ(ನಿ) ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜ, ಕಲಬುರಗಿ ವಿಭಾಗದ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕ ಎಸ್.ಬಿ.ದಿಡ್ಡಿಮನಿ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಪಿ.ಎಂ.ಗAಗಾಧರಪ್ಪ, ಜಿಲ್ಲಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಎಂ.ಬಿ.ಪಾಟೀಲ್, ಜಿಲ್ಲಾ ವಾರ್ತಾಧಿಕಾರಿ ಸುರೇಶ ಗುತ್ತೇದಾರ್ ಅವರು ವಿಶೇಷ ಆಹ್ವಾನಿತರಾಗಿ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ  ತಿಳಿಸಿದ್ದಾರೆ.

Please follow and like us:
error