ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ


ಕೊಪ್ಪಳ, : ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಅಕ್ಟೋಬರ್. 21 ರಂದು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಅ. 21 ರಂದು ಬೆಳಿಗ್ಗೆ 06 ಗಂಟೆಗೆ ಹಿರೇಕೆರೂರಿನಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಗೆ ಆಗಮಿಸಿ, ಅತಿವೃಷ್ಟಿಯಿಂದ ಹಾನಿಯಾಗಿರುವ ಕೊಪ್ಪಳ ತಾಲ್ಲೂಕಿನ ಕೋಳೂರಿನ ಬ್ರಿಡ್ಜ್-ಕಮ್-ಬ್ಯಾರೇಜ್‌ನ ವೀಕ್ಷಣೆ ಮಾಡುವರು.  10-30 ಗಂಟೆಗೆ ಜಿಲ್ಲೆಯ ಯಲಬುರ್ಗಾ, ಕುಕನೂರು ಮತ್ತು ಕುಷ್ಟಗಿ ತಾಲ್ಲೂಕುಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಬೆಳೆ ಹಾಗೂ ಮನೆಗಳ ವೀಕ್ಷಣೆ ಮಾಡುವರು.  11-30 ಕ್ಕೆ ಕೊಪ್ಪಳ ನಗರದಲ್ಲಿ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 01-30 ಗಂಟೆಗೆ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಳಗಾದ ಬೆಳೆ ಹಾಗೂ ಮನೆಗಳ ಹಾನಿ ಕುರಿತು ಹಾಗೂ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಂಡಿರುವ ಕ್ರಮದ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ನಂತರ ಮಧ್ಯಾಹ್ನ 03 ಗಂಟೆಗೆ ರಸ್ತೆ ಮಾರ್ಗವಾಗಿ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸುವರು.

Please follow and like us:
error