ಕೊಪ್ಪಳ ಜಿಲ್ಲಾ ಲಿಂಗಾಯತ ಸಮಾವೇಶ ಕುರಿತು ಪೂರ್ವಭಾವಿ ಸಭೆ

ಕೊಪ್ಪಳ:೫, ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸಂವಿಧಾನಾತ್ಮಕ ಮಾನ್ಯತೆ ಕುರಿತು ಕೊಪ್ಪಳ ಜಿಲ್ಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳುವ ಪೂರ್ವಭಾವಿ ಸಭೆಯನ್ನು ದಿನಾಂಕ: ೦೭-೧೦-೨೦೧೭ ಶನಿವಾರ ಸಂಜೆ ೪-೦೦ ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ಮಂಗಲಭವನದಲ್ಲಿ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ, ಯಲಬುರ್ಗಾ, ಗಂಗಾವತಿ, ಕೊಪ್ಪಳ ತಾಲೂಕಿನ ಎಲ್ಲಾ ಮುಖಂಡರು, ಸಮಾಜ ಭಾಂದವರು ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಜಿಲ್ಲಾ ಬಸವ ಸಮಿತಿಯ ಅಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿ ಮತ್ತು ವಿಶ್ವಗುರು ಬಸವೇಶ್ವರ ಟ್ರಸ್ಟಿನ ಅಧ್ಯಕ್ಷರಾದ ಎಂ.ಬಸವರಾಜಪ್ಪನವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.