ಕೊಪ್ಪಳ ಜಿಲ್ಲೆ :  13 ಸಾವಿರ ದಾಟಿದ ಕರೋನಾ ಸೋಂಕಿತರ ಸಂಖ್ಯೆ

ಕೊಪ್ಪಳ : ಜಿಲ್ಲೆಯಲ್ಲಿ ದಿನೇ ದಿನೇ ಕರೋನಾ ಟೆಸ್ಟ್ ಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ ಕರೋನಾ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಈಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13 ಸಾವಿರ ದಾಟಿದೆ.  ಇಂದು 79 ಪ್ರಕರಣಗಳು ದಾಖಲಾಗುವುದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 13024 ಪ್ರಕರಣಗಳು ವರದಿಯಾದಂತಾಗಿದೆ. ಕಳೆದ ಕೆಲವು ದಿನಗಳಿಂದ  ಪಾಜಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆಯಾದರೂ ಒಟ್ಟು ಸಂಖ್ಯೆ 13 ಸಾವಿರ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ.  ಇದುವರೆಗೆ ಒಟ್ಟು 12094 ಜನರು ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ.  ಜಿಲ್ಲೆಯಲ್ಲಿ ಈತನಕ ಸಾವನ್ನಪ್ಪಿದವರ ಸಂಖ್ಯೆ 272 ತಲುಪಿದೆ. 553 ಜನ ಹೋಮ್ ಐಸೋಲೇಷನ್ ನಲ್ಲಿದ್ದಾರೆ.  ಜಿಲ್ಲೆಯಲ್ಲಿ ಈವರೆಗೆ 142782 ಜನರನ್ನು ಟೆಸ್ಟ್ ಮಾಡಲಾಗಿದೆ . ಜನತೆ ಸೂಕ್ತ ಮುನ್ನಚ್ಚರಿಕೆ ಕೈಗೊಳ್ಳಬೇಕು , ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮನವಿ ಮಾಡಿದ್ಧಾರೆ.

Please follow and like us:
error