ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಿ: ವಿಕಾಸ್ ಕಿಶೋರ್ ಸುರಳ್ಕರ್

ಕೋವಿಡ್ ವ್ಯಾಕ್ಸಿನೇಷನ್ ಟಾಸ್ಕ್ ಫೋರ್ಸ್ ಸಮಿತಿ ಸಭೆ

ಕೊಪ್ಪಳ,  : ಜಿಲ್ಲೆಯಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರಿಂದ ಮಧುಮೇಹ, ರಕ್ಯದೊತ್ತಡ ಸೇರಿದಂತೆ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವವರ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸಮೀಕ್ಷೆಯನ್ವಯ ಮನೆ ಮನೆಗೆ ತೆರಳಿ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವಂತೆ ಸಾರ್ವಜನಿಕರ ಮನವೊಲಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ (ಮಾ. 15)ದಂದು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಕೋವಿಡ್ ವ್ಯಾಕ್ಸಿನೇಷನ್ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ತಾಲ್ಲೂಕುಗಳಲ್ಲೂ ಒಂದೊAದು ತಾಲ್ಲೂಕು ಕೋವಿಡ್ ವ್ಯಾಕ್ಸಿನೇಷನ್ ಟಾಸ್ಕ್ಫೋರ್ಸ್ ಸಮಿತಿಯನ್ನು ರಚನೆ ಮಾಡಲಾಗಿದ್ದು, ಇದರಲ್ಲಿ ಆಯಾ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಸಿಡಿಪಿಓಗಳು, ಬಿಇಓಗಳು ಸೇರಿದಂತೆ ವಿವಿಧ ಅಧಿಕಾರಿಗಳು ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಕರ್ತವ್ಯ ಲೋಪ, ಬೇಜವಾಬ್ದಾರಿ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದಾಗುತ್ತಿಲ್ಲ. ಹಾಗಾಗಿ ಅವರ ಮನವೊಲಿಸುವ ಜವಾಬ್ದಾರಿ ಸಮಿತಿಯಲ್ಲಿರುವ ಎಲ್ಲ ಅಧಿಕಾರಿಗಳ ಮೇಲಿದೆ. ರಾಜ್ಯ ಸರ್ಕಾರದ ನಿಯಮಗಳನ್ವಯ ನಮ್ಮ ಜಿಲ್ಲೆಗೆ ಸಂಬAಧಿಸಿದAತೆ ಜನರು ಲಸಿಕೆ ಹಾಕಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಒಟ್ಟು 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಈ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವ್ಯಾಕ್ಸಿನ್ ಲಸಿಕೆ ಹಾಕಿಸಲು ಹೆಸರುಗಳನ್ನು ನೋಂದಾಯಿಸಿಕೊಳ್ಳಲಾಗುತ್ತದೆ. ಯಾವ ದಿನಾಂಕದAದು ಹಾಗೂ ಯಾವ ಸ್ಥಳದಲ್ಲಿ ವ್ಯಾಕ್ಸಿನ್ ಹಾಕುತ್ತಾರೆ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಆಯಾ ಹಳ್ಳಿಗಳಿಗೆ ಮತ್ತು ತಾಂಡಾಗಳಿಗೆ ವಾಹನ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ಇಲಾಖೆಗಳ ಅಧಿಕಾರಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಕೋವಿಡ್ ವ್ಯಾಕ್ಸಿನ್ ಕಾರ್ಯವನ್ನು ಯಶಸ್ವಿಗೊಳಿಸಲು ಸಾಧ್ಯ. ಆದ್ದರಿಂದ ಎಲ್ಲ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಬೇಕು. ರಾಜ್ಯದಲ್ಲಿ ಆಫ್ರಿಕಾದಿಂದ ಬಂದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದ್ದು, ಪಕ್ಕದ ಬಳ್ಳಾರಿಯಲ್ಲಿಯೂ ಕೋವಿಡ್-19 ಪ್ರಕರಣಗಳು ಕಂಡುಬAದಿವೆ. ಹಾಗಾಗಿ ಬಳ್ಳಾರಿ ಗಡಿ ಹಂಚಿಕೊAಡಿರುವ ಪ್ರದೇಶಗಳಲ್ಲಿ ಮುಂಜಾಗ್ರತೆ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚು ಕಷ್ಟ ಅನುಭವಿಸಬೇಕಾಗುತ್ತದೆ. ವಿವಿಧ ತಾಲ್ಲೂಕುಗಳಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಸಂಬAಧಿಸಿದ ಅಧಿಕಾರಿಗಳು ಭೇಟಿ ನೀಡಿ, ಕೋವಿಡ್ ನಿಯಮ ಪಾಲನೆ ಮಾಡುವಂತೆ ಸೂಚನೆ ನೀಡಬೇಕು. ನಿಯಮ ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಲಸಿಕೆ ನೀಡಲು ನಿರ್ದಿಷ್ಟ ಗುರಿಯ ಮಿತಿಯಿಲ್ಲ. ಸಾಧ್ಯವಾದಷ್ಟು ಹೆಚ್ಚು ಜನರಿಗೆ ಲಸಿಕೆಯನ್ನು ನೀಡಬೇಕು ಎಂದು ಅವರು ತಹಶೀಲ್ದಾರ್‌ರು ಮತ್ತು ಟಿಎಚ್‌ಓಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಶರಣಬಸವರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕಾನಂದ ಮಳಗಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಎಸ್.ಬಿ.ದಾನರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error