ಗಿಣಿಗೇರಾ ಕೆರೆಗೆ ಸಚಿವ ಬಿ.ಸಿ.ಪಾಟೀಲ್ ಭೇಟಿ : ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆ

ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇಂದು (ಏಪ್ರಿಲ್ 16 ರಂದು) ಕೊಪ್ಪಳ ತಾಲ್ಲೂಕಿನ ಗಿಣಿಗೇರಾ ಗ್ರಾಮದ ಕೆರೆಗೆ ಭೇಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿದರು. ಬಳಿಕ ಗಿಣಿಗೇರಾದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿ.ಪಂ. ಸದಸ್ಯರಾದ ಗವಿಸಿದ್ದಪ್ಪ ಕರಡಿ ಹಾಗೂ ರಾಮಣ್ಣ ಚೌಡ್ಕಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ ಸುರಳ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು

Please follow and like us:
error