ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ – ಶಂಭುಲಿಂಗನಗೌಡ ಪಾಟೀಲ

ಕೊಪ್ಪಳ: ಸರಕಾರವು ‘ವಿದ್ಯಾಗಮ’ ಕಾರ್ಯಕ್ರಮವನ್ನು ಆರಂಭಿಸಿದ್ದು, ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿರುವುದು ಶಿಕ್ಷಕರಿಗೆ ಸಂತಸವೆನಿಸಿದ್ದು, ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದು ಕ.ರಾ.ಪ್ರಾ.ಶಾ.ಶಿ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಹೇಳಿದರು.
ಅವರು ದಿ: ೦೩-೦೧-೨೦೨೧ರಂದು ನಗರದ ವಾಲ್ಮೀಕಿ ಭವನದಲ್ಲಿ ನಡೆದ ರಾಜ್ಯಮಟ್ಟದ “ಶ್ರೀಮತಿ ಸಾವಿತ್ರಿಬಾಯಿ ಫುಲೆ” ಜಯಂತಿ ಮತ್ತು ‘ಉತ್ತಮ ಶಿಕ್ಷಕಿ’ ಪ್ರಶಸ್ತಿ ಪ್ರದಾನ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರು ನುಗ್ಲಿ ಮಾತನಾಡಿ ದೇಶದ ಮೊಟ್ಟ ಮೊದಲ ಶಿಕ್ಷಕಿಯಾಗಿ, ಸಮಾಜ ಸುಧಾರಕರಾಗಿ, ಸಮ-ಸಮಾಜದ ಕನಸನ್ನು ಕಂಡು ಅದನ್ನು ಸಾಕಾರಗೊಳಿಸಲು ತಮ್ಮ ಜೀವನವನ್ನೇ ಮುಡುಪಿಟ್ಟ ಮಹಾನ್ ಸಾಧಕಿ ಸಾವಿತ್ರಿಬಾಯಿ ಫುಲೆ ಅವರ ಸನ್ಮಾರ್ಗ ಇಂದಿಗೂ ನಮಗೆಲ್ಲ ಮಾದರಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಂಘದ ಜಿಲ್ಲಾಧ್ಯಕ್ಷರಾದ ಶರಣಬಸನಗೌಡ ಮಾತನಾಡಿ ಶಿಕ್ಷಕರ ಜ್ವಲಂತ್ ಸಮಸ್ಯೆಗಳು, ವರ್ಗಾವಣೆ ಸಮಸ್ಯೆ, ಶಾಲೆಗಳ ಸಬಲೀಕರಣದ ಬಗ್ಗೆ ನಮ್ಮ ಸಂಘ ಸದಾ ಶ್ರಮಿಸುತ್ತದೆ. ಶಿಕ್ಷಕರ ಸಹಕಾರ ಪ್ರೀತಿ ಸದಾ ನಮ್ಮೊಂದಿಗೆ ಇರಲಿ ಎಂದರು.
ಇದೇ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಶಿಕ್ಷಕಿಯರನ್ನು ಗೌರವಿಸಲಾಯಿತು. ಕೊಪ್ಪಳ ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣವು ನಡೆಯಿತು. ರಾಜ್ಯ ಸಂಘದ ಪದಾಧಿಕಾರಿಗಳಾದ ಪ್ರಮಿಳಾ, ಸುಮತಿ ಜಿ, ನಾಗನಗೌಡ, ಯುವರಾಜ ಕೆ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ನೌಕರ ಸಂಘ, ಪತ್ತಿನ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಜ್ಯೋತಿ ಕೊಪ್ಪಳಕರ್ ಪ್ರಾರ್ಥನೆ ಮಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಬಿ ಸ್ವಾಗತಿಸಿದರು. ರಮೇಶ ಬಿ, ಪೂರ್ಣಿಮಾ, ಯಶೋಧಾ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Please follow and like us:
error