ಗ್ರಾಮೀಣ ಅಂಚೆ ನೌಕರರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಆ. : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2637 ಗ್ರಾಮಿಣ ಅಂಚೆ ನೌಕರರ ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.  18 ರಿಂದ 40 ವರ್ಷ ವಯೊಮಿತಿಯಲ್ಲಿರಬೇಕು. ಅನುಸೂಚಿತ ಜಾತಿ, ಬುಡಕಟ್ಟು,  ಹಿಂದೂಳಿದ ವರ್ಗಗಳಿಗೆ ಸೇರಿದ ಅರ್ಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.  ಇತರ ಹಿಂದೂಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗಗದ ಅರ್ಭ್ಯರ್ಥಿಗಳಿಗೆ 100 ರೂ. ಗಳ ಅರ್ಜಿ ಶುಲ್ಕವಿದ್ದು, ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಅನುಸೂಚಿತ ಜಾತಿ ಮತ್ತು ಬುಡಕಟ್ಟು ಅರ್ಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್. 04 ಕೊನೆಯದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ https://indiapost.gov.in ಅಥವಾ http://appost.in/gdsonline ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ರಾಜ್ಯದ ಯಾವುದೇ ಮುಖ್ಯ ಅಂಚೆ ಕಛೇರಿಯಲ್ಲಿ ಅಥವಾ ಆಯ್ದ ಅಂಚೆ ಕಚೇರಿಗಳ ಕೌಂಟರ್‌ನಲ್ಲಿ ಅಥವಾ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಯು.ಆರ್.ಎಲ್. ಲಿಂಕ್ ಮೂಲಕವೂ ಸಹ ಅರ್ಜಿ ಶುಲ್ಕವನ್ನು ಪಾವತಿಸಬಹುದು.  ಹೆಚ್ಚಿನ ವಿವರಗಳಿಗಾಗಿ http://appost.in/gdsonline ನೋಡಬಹುದು .

Please follow and like us:
error