ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು-ಸಂತೋಷ ದೇಶಪಾಂಡೆ

ಕೊಪ್ಪಳ, ೦೮- ಪ್ರತಿ ಮನೆ, ದೇಶದ ಅಭಿವೃದ್ಧಿ ಮಹಿಳೆಯರ ಶಿಕ್ಷಣದಲ್ಲಿ ಅಡಗಿದೆ. ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಬೇಂದ್ರೆ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಸಂತೋಷ ದೇಶಪಾಂಡೆ ಹೇಳಿದರು.
ಅವರು ಗಿಣಿಗೇರಿ ಗ್ರಾಮದಲ್ಲಿ ಶ್ರೀ ಗವಿಶ್ರೀ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಬೇಂದ್ರೆ ಪಬ್ಲಿಕ್ ಸ್ಕೂಲ್‌ನ ೭ನೇ ತರಗತಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಹಾಗೂ ಮಹಿಳಾ ದಿನಾಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಗ್ರಾಮೀಣ ಭಾಗದಲ್ಲಿ ಮಹಿಳೆಯರು ಶಿಕ್ಷಣದಲ್ಲಿ ಹಿಂದುಳಿದಿದ್ದು ಎಲ್ಲ ಪಾಲಕರು ಗಂಡು-ಹೆಣ್ಣು ಭೇದ ಎಣಿಸದೇ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಅಂದಾಗ ಮಾತ್ರ ದೇಶ ಅಭಿವೃದ್ಧಿ ಸಾಧ್ಯ ಎಂದರು.
ನಗರದಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ ಗ್ರಾಮೀಣ ಭಾಗದಲ್ಲಿಯೂ ಕೊಡುವ ಸದುದ್ದೇಶದಿಂದ ನಮ್ಮ ಸಂಸ್ಥೆ ಮೂಲಕ ಗ್ರಾಮೀಣ ಭಾಗದಲ್ಲಿ ಶಾಲೆ ಪ್ರಾರಂಭಿಸಿದ್ದು ಯಾವುದೇ ಒಂದು ಹೆಣ್ಣು ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂದರು.
ಶಾಲಾ ಮುಖ್ಯೋಪಾಧ್ಯಾಯ ಬಸವರಾಜ ಶಿರಗುಂಪಿ ಶೆಟ್ಟರ್ ಮಾತನಾಡಿ ಮಹಿಳೆಯರು ಶಿಕ್ಷಣವಂತರಾದಾಗ ಮಾತ್ರ ಸರ್ವ ಸಮಸ್ಯೆಗೂ ಪರಿಹಾರ ಸಾಧ್ಯ. ಗ್ರಾಮೀಣ ಭಾಗದ ಮಹಿಳೆಯರಿಗೂ ಶಿಕ್ಷಣ ದೊರೆಯಬೇಕು ಎಂದರು.
ಈ ಸಂದರ್ಭದಲ್ಲಿ ೭ನೇ ತರಗತಿ ವಿದ್ಯಾರ್ಥಿಗಳಿಂದ ಮಾತೃ ಪೂಜಾ ಕಾರ್ಯಕ್ರಮ ಜರುಗಿತು. ಶಾಲಾ ಶಿಕ್ಷಕರು, ಪಾಲಕರು ಭಾಗವಹಿಸಿದ್ದರು.

Please follow and like us:
error