ಗ್ರಾಮ ಪಂಚಾಯಿತಿ ಚುನಾವಣೆ : ಕಣದಲ್ಲಿ 3,095 ಅಭ್ಯರ್ಥಿಗಳು

ಎರಡನೇ ಹಂತದ : 169 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಕೊಪ್ಪಳ,  : ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ನಾಮಪತ್ರ ಸಲ್ಲಿಕೆಯೂ ಮುಕ್ತಾಯಗೊಂಡಿದ್ದು, ನಾಲ್ಕು ತಾಲ್ಲೂಕುಗಳ 76 ಗ್ರಾಮ ಪಂಚಾಯಿತಿಗಳಲ್ಲಿನ 1,375 ಸ್ಥಾನಗಳಲ್ಲಿ 169 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 1,206 ಸ್ಥಾನಗಳಿಗೆ ಅಂತಿಮವಾಗಿ 3,095 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಡಿಸೆಂಬರ್ 27ಕ್ಕೆ ನಡೆಯುವ ಎರಡನೇ ಹಂತದ ಚುನಾವಣೆಗೆ ಜಿಲ್ಲೆಯ ಗಂಗಾವತಿ ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳಲ್ಲಿನ 347 ಸ್ಥಾನಗಳಲ್ಲಿ 23 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 324 ಸ್ಥಾನಗಳಿಗೆ 870 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಕಾರಟಗಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 207 ಸ್ಥಾನಗಳಲ್ಲಿ 35 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 172 ಸ್ಥಾನಗಳಿಗೆ 413 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕನಕಗಿರಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 196 ಸ್ಥಾನಗಳಲ್ಲಿ 55 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 141 ಸ್ಥಾನಗಳಿಗೆ 351 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಕುಷ್ಟಗಿ ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳಲ್ಲಿನ 625 ಸ್ಥಾನಗಳಲ್ಲಿ 56 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 569 ಸ್ಥಾನಗಳಿಗೆ 1,461 ಅಭ್ಯರ್ಥಿಗಳು ಕಣದಲ್ಲಿದ್ದಾರೆ .

Please follow and like us:
error