ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಬೇಕು : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ, : ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಸಕ್ರಿಯವಾಗಿ ಭಾಗವಹಿಸಿ ಗ್ರಾಮದ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫೆ.20 ರಂದು ಹಮ್ಮಿಕೊಳ್ಳಲಾಗಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರತಿ ತಿಂಗಳು ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳು, ಭೂದಾಖಲೆಗಳ ಉಪ ನಿರ್ದೇಶಕರು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಉಪ ವಿಭಾಗದ ಸಹಾಯಕ ಆಯುಕ್ತರು, ಸಂಬAಧಪಟ್ಟ ತಹಶೀಲ್ದಾರ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿಯೇ ವಾಸ್ತವ್ಯ ಮಾಡುವ ಮೂಲಕ ಗ್ರಾಮದ ಮೂಲಭೂತ ಸೌಕರ್ಯಗಳು, ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ ಮುಂತಾದವುಗಳನ್ನು ಪರಿಶೀಲಿಸಿ, ಸ್ಥಳದಲ್ಲಿಯೇ ಸೂಕ್ತ ಪರಿಹಾರ ಒದಗಿಸುವ ಮಹತ್ವದ ಉದ್ದೇಶದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಫೆ.20 ರಂದು ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುAಟಾ ಹೋಬಳಿಯ ಹಿರೇವಡ್ರಕಲ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುತ್ತಿದೆ. ಅಂದು ಕಂದಾಯ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮದಲ್ಲಿ ಉಪಸ್ಥಿತರಬೇಕು. ಗ್ರಾಮಗಳನ್ನು ತಲುಪಲು ಸೂಕ್ತವಾದ ಸಾರಿಗೆ ವ್ಯವಸ್ಥೆಯನ್ನು ಕೆ.ಎಸ್.ಆರ್‌ಟಿ.ಸಿ ಅಧಿಕಾರಿಗಳು ಕಲ್ಪಿಸಬೇಕು. ಈಗಾಗಲೇ ನಿಡಿರುವ ಕಾರ್ಯಸೂಚಿಗಳನ್ವಯ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹೀಮದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಂತಾದ ಇಲಾಖೆಗಳು ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ, ಬಾಕಿ ಇರುವ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಬೇಕು. ಹಾಗೂ ಸಂಬAಧಿಸಿದ ಫಲಾನುಭವಿಗೆ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ, ಯೋಜನೆಯನ್ನು ತಲುಪಿಸಬೇಕು ಎಂದು ಅವರು ಹೇಳಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಿರೇವಡ್ರಕಲ್ ಗ್ರಾಮ ಒಳಪಡುವ ಬ್ಯಾಂಕ್‌ನ ಸಿಬ್ಬಂದಿಯೊAದಿಗೆ ಚರ್ಚಿಸಿ, ಗ್ರಾಮ ವಾಸ್ತವ್ಯದ ದಿನದಂದು ಬ್ಯಾಂಕ್ ಖಾತೆ ಹೊಂದಿರದವರಿಗೆ ಖಾತೆ ತೆರೆಯಲು ಅವಕಾಶ ಕಲ್ಪಿಸಬೇಕು. ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಪಿಂಚಣಿಗಳನ್ನು ಸದ್ಯ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತಿರುವುದರಿಂದ ಅರ್ಹ ಪಿಂಚಣಿ ಫಲಾನುಭವಿಗಳು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ಬ್ಯಾಂಕ್ ಖಾತೆ ಹೊಂದಿರದವರಿಗೆ ಬ್ಯಾಂಕ್ ಖಾತೆ ತೆರೆಯಲು ಕ್ರಮ ಕೈಗೊಳ್ಳಬೇಕು. ಇದರಿಂದ ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಪಡೆಯಲು ಗ್ರಾಮದ ಜನರಿಗೆ ಸಹಾಯಕವಾಗುತ್ತದೆ ಎಂದು ಅವರು ಹೇಳಿದರು.
ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿನ ಭೂ ಸಂಬAಧಿತ ಪ್ರಕರಣಗಳನ್ನು ಅಂದು ಸ್ಥಳದಲ್ಲಿಯೇ ಇತ್ಯರ್ಥಪಡಿಸಬೇಕು. ಗ್ರಾಮಕ್ಕೆ ಅಗತ್ಯವಾದ ಸ್ಮಶಾನ ಭೂಮಿ, ಚರಂಡಿ ನಿರ್ಮಾಣ, ರಸ್ತೆ ನಿರ್ಮಾಣ, ಶಾಲಾ ಕೊಠಡಿಗಳ ದುರಸ್ಥಿ, ರೈತರ ಜಮೀನುಗಳ ಸರ್ವೇ ನಂಬರ್ ಸಂಬAಧಿತ ಪ್ರಕರಣಗಳನ್ನು ಸ್ಥಳದಲ್ಲಿಯೇ ಬಗೆಹರಿಸಬೇಕು. ಅನಧಿಕೃತವಾಗಿ ಆಕ್ರಮಿಸಿದ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅವರು ಹೇಳಿದರು.
ಸಾರಿಗೆ ಇಲಾಖೆ ಅಧಿಕಾರಿಗಳು ಹಾಜರಿದ್ದು, ಗ್ರಾಮಗಳಲ್ಲಿ ನೋಂದಣಿಯಾಗದೇ ಬಳಕೆಯಲ್ಲಿರುವ ವಾಹನಗಳ ನೋಂದಣಿಗೆ ಕ್ರಮ ಕೈಗೊಳ್ಳಬೇಕು. ಸಾರಿಗೆ ಇಲಾಖೆಯಿಂದ ಮಳಿಗೆಯನ್ನು ಹಾಕಬೇಕು. ಅಲ್ಲಿ ವಾಹನ ನೋಂದಣಿ, ಚಾಲನಾ ಪರವಾನಗಿ ಕುರಿತಾದ ಅರ್ಜಿಗಳನ್ನು ಸ್ವೀಕರಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ವಾಹನ ನೋಂದಣಿ, ಚಾಲನಾ ಪರವಾನಗಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸಾರಿಗೆ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ನರೇಗಾ ಅಡಿ ಕೂಲಿಕಾರರ ನೋಂದಣಿ, ಗ್ರಾ.ಪಂ. ಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿದ ಕಾಮಗಾರಿಗಳ ಅನುಷ್ಠಾನ, ಫಲಾನುಭವಿಗಳ ಆಯ್ಕೆ ಸೇರಿದಂತೆ ಇತರೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಪಂಚಾಯತ್ ರಾಜ್ ಇಲಾಖೆಯಿಂದ ಬಾಕಿ ಇರುವ ರಸ್ತೆ ನಿರ್ಮಾಣ, ಕಟ್ಟಡಗಳ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಕೆಯಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಗಳ ಬಗ್ಗೆ ಸ್ಥಳೀಯ ಶಾಲಾ ಮುಖ್ಯಸ್ಥರಿಂದ ಮಾಹಿತಿ ಸಂಗ್ರಹಿಸಿ, ವಿದ್ಯಾರ್ಥಿ ವೇತನಕ್ಕೆ ಇದುವರೆಗೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳನ್ನು ಗುರುತಿಸಿ ಅವರಿಂದ ಅರ್ಜಿ ಸ್ವೀಕರಿಸಬೇಕು. ಸರ್ಕಾರದಿಂದ ವಿದ್ಯಾರ್ಥಿ ವೇತನ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಾರ್ಡನ್‌ಗಳು ಸೇರಿದಂತೆ ಇಲಾಖೆಗಳ ಸಿಬ್ಬಂದಿಯ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮದಲ್ಲಿ ವಿಕಲಚೇತನರಿಗೆ ಸರ್ಕಾರದ ಪಿಂಚಣಿ ಪಡೆಯುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಬೇಕು. ಆದ್ದರಿಂದ ಅಂದು ಗ್ರಾಮದಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕರು, ಮೂಳೆ ತಜ್ಞರು, ಇತರೆ ತಜ್ಞ ವೈದ್ಯರ ತಂಡದೊAದಿಗೆ ಹಾಜರಿದ್ದು ಗ್ರಾಮದಲ್ಲಿನ ವಿಕಲಚೇತನರನ್ನು ಗುರುತಿಸಿ ಅವರಿಗೆ ಆರೋಗ್ಯ ಇಲಾಖೆಯಿಂದ ನೀಡಲಾಗುವ ವಿಕಲಾಂಗತೆ ಪ್ರಮಾಣ ಪತ್ರವನ್ನು ಒದಗಿಸಬೇಕು. ಇದರಿಂದ ಅವರಿಗೆ ಪಿಂಚಣಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ. ಹಾಗೆಯೇ ಆರೋಗ್ಯ ಇಲಾಖೆಯ ಮಹತ್ವದ ಯೋಜನೆಯಾದ ‘ಶುಚಿ’ ಕಾರ್ಯಕ್ರಮದ ಕುರಿತು ಗ್ರಾಮದಲ್ಲಿ ಜಾಗೃತಿ ಮೂಡಿಸಬೇಕು. ಹೆಣ್ಣು ಮಕ್ಕಳಲ್ಲಿ ವೈಯಕ್ತಿಕ ಶುಚಿತ್ವದ ಮಹತ್ವವನ್ನು ತಿಳಿಸುವ ಕಾರ್ಯಕ್ರಮ ರೂಪಿಸಬೇಕು ಎಂದು ಅವರು ಹೇಳಿದರು.
ಫೆ.20 ರಂದು ಹಿರೇವಡ್ರಕಲ್ ಗ್ರಾಮದಲ್ಲಿ ರಕ್ತದಾನ ಶಿಬಿರವನ್ನು ಸಹ ಆಯೋಜಿಸಲಾಗಿದೆ. ರಕ್ತದಾನಕ್ಕೂ ಮೊದಲು ದಾನಿಯ ಮಧುಮೇಹ ಮತ್ತು ರಕ್ತದೊತ್ತಡದ ಪರೀಕ್ಷೆಯನ್ನು ಮಾಡಲಾಗುತ್ತದೆ. ಮಧುಮೇಹ ಪತ್ತೆಯಾದ ವ್ಯಕ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡಲಾಗುವ ಮೋರಿಂಗ್ ಪುಡಿಯನ್ನು ನೀಡುವ ಯೋಜನೆಯಿದೆ. ಅದರಂತೆ ಗ್ರಾಮದಲ್ಲಿನ ಅಂಗನವಾಡಿಗಳಲ್ಲಿರುವ ಅಪೌಷ್ಠಿಕತೆಯುಳ್ಳ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯವಾದ ಪೌಷ್ಠಿಕ ಆಹಾರವನ್ನು ಒಳಗೊಂಡ ಕಿಟ್‌ಗಳನ್ನು ವಿತರಿಸುವ ಯೋಜನೆಯೂ ಇದೆ. ಅದಕ್ಕಾಗಿ ಇಲಾಖೆಯ ಉಪನಿರ್ದೇಶಕರು ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಗ್ರಾಮದಲ್ಲಿ ಪಿ.ಯು.ಸಿ. ಐಟಿಐ, ಪದವಿ ಪಡೆದ ನಿರುದ್ಯೋಗಿಗಳ ನೋಂದಣಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಉದ್ಯೋಗ ಪಡೆಯಲು ಇರುವ ಅವಕಾಶಗಳ ಕುರಿತು ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.
ಗ್ರಾಮ ವಾಸ್ತವ್ಯವನ್ನು ಪ್ರತಿ ತಿಂಗಳು ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಮಡಲಾಗುತ್ತದೆ. ಅದರಂತೆ ತಾಲ್ಲೂಕು ತಹಶೀಲ್ದಾರರು ಜಿಲ್ಲಾಧಿಕಾರಿಗಳು ಭೇಟಿ ನೀಡಿದ ತಾಲ್ಲೂಕನ್ನು ಹೊರತು ಪಡಿಸಿ ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಭೇಟಿ ನೀಡಿ ವಾಸ್ತವ್ಯ ಮಾಡಬೇಕು. ಸ್ಥಳದಲ್ಲಿಯೇ ಪರಿಹರಿಸಬಹುದಾದ ಗ್ರಾಮದ/ಗ್ರಾಮಸ್ಥರ ಯಾವುದೇ ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಬೇಕು. ಸರ್ಕಾರಿ ಸೌಲಭ್ಯವನ್ನು ಗ್ರಾಮದವರೆಗೂ ತಲುಪಿಸುವ ಸೇವಾಧಾರಿತ ಕಾರ್ಯಕ್ರಮ ಇದಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯದ ಉದ್ದೇಶವನ್ನು ಸಾರ್ಥಕಗೊಳಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಶರಣಬಸವರಾಜ, ಸಹಾಯಕ ಆಯುಕ್ತರಾದ ನಾರಾಯಣರೆಡ್ಡಿ ಕನಕರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error