ಗ್ರಾ ಪಂ. ಚುನಾವಣೆ ಡಿ. 22 ಮತ್ತು 27 ರಂದು ರಜೆ ಘೋಷಣೆ


ಕೊಪ್ಪಳ,   ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2020ರ ನಿಮಿತ್ತ ಡಿ. 22 ಮತ್ತು 27 ರಂದು ನಡೆಯಲಿರುವ ಮತದಾನ ದಿನದಂದು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅರ್ಹ ಮತದಾರ ನೌಕರರಿಗೆ ಸೀಮಿತವಾಗುವಂತೆ ಸರ್ಕಾರವು ವೇತನ ಸಹಿತ ರಜೆಯನ್ನು ಘೋಷಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಿಳಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2020ರ ವೇಳಾಪಟ್ಟಿಯನ್ನು ಹೊರಡಿಸಿದ್ದು, ಇದೇ ಡಿಸೆಂಬರ್ 22 ರಂದು ಕೊಪ್ಪಳ, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನ ಗ್ರಾಮ ಪಂಚಾಯತಿಗಳಿಗೆ ಮೊದಲನೇ ಹಂತದಲ್ಲಿ ಮತ್ತು ಡಿ. 27 ರಂದು ಕುಷ್ಟಗಿ, ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳಿಗೆ ಎರಡನೇ ಹಂತದಲ್ಲಿ ಮತದಾನವನ್ನು ನಿಗದಿಪಡಿಸಿರುತ್ತದೆ.
ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟಿçÃಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ. ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಶ್‌ಮೆಂಟ್‌ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 22 ಮಂಗಳವಾರದAದು ಕರ್ನಾಟಕ ಪಂಚಾಯತ್‌ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993ರ ನಿಯಮ 114ನ್ನು ಓದಿಕೊಂಡAತೆ, ಪ್ರಜಾ ಪ್ರತಿನಿಧಿ ಕಾಯ್ದೆ 1954ರ ಸೆಕ್ಷನ್-135ಬಿರಡಿಯಲ್ಲಿ ಸರ್ಕಾರವು ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ.
ಸರ್ಕಾರದ ಆದೇಶದನ್ವಯ ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು, ಈ ಚುನಾವಣೆ ಕಾರ್ಯಗಳಿಗೆ ನಿಯೋಜಿಸಲಸ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error