ಗ್ರಾ.ಪಂ ಚುನಾವಣೆ : ಸಂತೆ-ಜಾತ್ರೆ ನಿಷೇಧ

ಕೊಪ್ಪಳ,  : ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2020ರ ನಿಮಿತ್ತ ಇದೇ ಡಿ. 22 ಮತ್ತು 27 ರಂದು ಜಿಲ್ಲೆಯ ವಿವಿಧ ಗ್ರಾ.ಪಂ. ಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಅವಧಿಯಲ್ಲಿ ಸಂತೆ-ಜಾತ್ರೆಗಳನ್ನು ನಿಷೇಧಿಸಿ  ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2020ರ ವೇಳಾಪಟ್ಟಿಯನ್ನು ಹೊರಡಿಸಿದ್ದು, ಇದೇ ಡಿಸೆಂಬರ್ 22 ರಂದು ಮೊದಲನೇ ಹಂತದಲ್ಲಿ ಕೊಪ್ಪಳ, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನ ಗ್ರಾಮ ಪಂಚಾಯತಿಗಳಿಗೆ ಮತ್ತು 27ರಂದು ಎರಡನೇ ಕುಷ್ಟಗಿ, ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲ್ಲೂಕುಗಳ ಗ್ರಾಮ ಪಂಚಾಯತಿಗೆಮತದಾನವನ್ನು ನಿಗದಿಪಡಿಸಿರುತ್ತದೆ.  ಈ ಹಿನ್ನೆಲೆಯಲ್ಲಿ ಮತದಾನವು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮವಹಿಸಲು ಸಿ.ಆರ್.ಪಿ.ಸಿ 1973ರ ಕಲಂ 144ರಲ್ಲಿ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36ರ ಅಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಇದೇ ಡಿ. 22 ರಂದು ನಡೆಯುವ ಮೊದಲ ಹಂತ ಮತದಾನ ಮತ್ತು 27 ರಂದು ನಡೆಯುವ ಎರಡನೇ ಹಂತದ ಮತದಾನ ದಿನಗಳಂದು ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುವ ಸಂತೆ-ಜಾತ್ರೆಗಳನ್ನು ನಿಷೇಧಿಸಿ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ

Please follow and like us:
error