ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಮೈಸೂರು,: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ವೇಳೆ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂಬುದನ್ನು ಒಪ್ಪಿಕೊಂಡರು.

‘ಸಾಮಾಜಿಕ ನ್ಯಾಯ ಎಂದು ಹೇಳುವ ನೀವು ಈ ಬಾರಿ ಜೆಡಿಎಸ್ ಪಕ್ಷದಿಂದ ಒಂದೇ ಒಂದು ಸೀಟನ್ನು ಮುಸ್ಲಿಂ ಸಮುದಾಯದವರಿಗೆ ಕೊಟ್ಟಿಲ್ಲ. ಆದರೆ ನೀವು ಎಲ್ಲಾ ಸಮುದಾಯ ಮತ್ತು ಧರ್ಮದವರನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವುದಾಗಿ ಹೇಳುತ್ತೀರಿ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೌದು, ಈ ಬಾರಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಮರಿಗೆ ಅನ್ಯಾಯವಾಗಿದೆ. ಇಷ್ಟು ಬಾರಿ ಮೂರು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದು ಸಾಧ್ಯವಾಗಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿದ್ದರೂ ಒಂದೇ ಒಂದು ಕಡೆ ಟಿಕೆಟ್ ನೀಡಲಾಗಿದೆ, ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸುವುದಾಗಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.

Please follow and like us:
error