ಜಗಜೀವನರಾಮ್ ಹಾಗೂ ಅಂಬೇಡ್ಕರ್ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ,  : ಏಪ್ರಿಲ್ 05 ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ರವರ 114ನೇ ಹಾಗೂ ಏ. 14 ರಂದು ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಅವರು ಗುರುವಾರದಂದು (ಮಾ. 25) ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಗಜೀವನರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಣೆ ಕುರಿತ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಜಯಂತಿಗಳನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಈ ವರ್ಷದ ಜಗಜೀವನರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿಗಳನ್ನು ವಿಜೃಂಭಣೆಯಿAದ ಆಚರಿಸಬೇಕು ಎಂದು ಯೋಜಿಸಲಾಗಿತ್ತು, ಆದರೆ ಪ್ರಸ್ತುತ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಸಹ ವಾರದಲ್ಲಿ ಸುಮಾರು 50 ಪ್ರಕರಣಗಳು ಕಂಡುಬರುತ್ತಿರುವುದರ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯವಶ್ಯಕವಾಗಿದೆ. ಆದ್ದರಿಂದ ಜಗಜೀವನರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿಗಳನ್ನು ಮೆರವಣಿಗೆಯನ್ನು ಹೊರತುಪಡಿಸಿ 500 ಜನ ಸಾಮರ್ಥ್ಯದ ಸಭಾಂಗಣದಲ್ಲಿ ವೇದಿಕೆ ಹಾಗೂ ಪೂಜಾ ಕಾರ್ಯಕ್ರಮದ ಮೂಲಕ ಹಾಗೂ ಮಹಾನಾಯಕರ ಕುರಿತ ಕಿರುಚಿತ್ರ ಪ್ರದರ್ಶನ, ಅವರ ಜೀವನ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಈ ಬಾರಿಯ ಜಯಂತಿಯನ್ನು ಅರ್ಥಗರ್ಭಿತವಾಗಿ ಆಚರಿಸೋಣ ಎಂದರು.
ಡಾ. ಬಾಬು ಜಗಜೀವನರಾಮ್ ರವರ ಜಯಂತಿಯನ್ನು ಏ. 05 ರಂದು ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಏ. 14 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಚರಿಸಲಾಗುವುದು. ಜಯಂತಿ ಆಚರಣೆ ನಿಮಿತ್ತ ಅಂದು ಬೆಳಿಗ್ಗೆ 08-30 ಗಂಟೆಗೆ ಜಗಜೀವನರಾಮ್ ಹಾಗೂ ಅಂಬೇAಡ್ಕರ್ ರವರ ಪುತ್ಥಳಿಗೆ ಪುಷ್ಪಾರ್ಪಣೆ ನಡೆಯಲಿದೆ. ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜದ ಮುಖಂಡರಾದ ಡಾ.ಜ್ಞಾನಸುಂದರ್ ಮಾತನಾಡಿ, ಬಾಬು ಜಗಜೀವನರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಕಳೆದ ಮೂರು ವರ್ಷಗಳಿಂದ ವಿವಿಧ ಕಾರಣಾಂತರಗಳಿAದ ವಿಜೃಂಭಣೆಯಿAದ ಆಚರಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಬಾರಿ ಅರ್ಥಪೂರ್ಣವಾಗಿ ಆಚರಿಸಲು ಹಾಗೂ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿತ್ತು, ಇದಕ್ಕೆ ಜಿಲ್ಲಾಧಿಕಾರಿಗಳು, ಜಗಜೀವನರಾಮ್ ಹಾಗೂ ಅಂಬೇಡ್ಕರ್ ಜಯಂತಿಗಳು ವಿಷೇಶವಾಗಿವೆ. ಸದ್ಯ ದಿನೇ-ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮೆರವಣಿಗೆಗೆ ಮಾಡುವುದು ಬೇಡ. ಬದಲಿಗೆ ವೇದಿಕೆ ಕಾರ್ಯಕ್ರಮ ಸೇರಿದಂತೆ ಮಹನೀಯರ ಜೀವನ ಕುರಿತು ಉಪನ್ಯಾಸ, ಮಹನೀಯರ ಸಂದೇಶಗಳನ್ನು ಸಾರುವ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಹೇಳಿದರು.
500 ಆಸನಗಳ ಸಾಮರ್ಥ್ಯದ ಯಾವುದಾದರೊಂದು ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.
ನಗರದಲ್ಲಿ ಮಹನೀಯರ ಪುತ್ಥಳಿಯುಳ್ಳ ಉದ್ಯಾನವನವೂ ಸ್ವಚ್ಛತೆ ಹಾಗೂ ಪುತ್ಥಳಿಯ ಸರಿಯಾದ ನಿರ್ವಹಣೆ ಇಲ್ಲದಿರುವ ಬಗ್ಗೆ ಸಮಾಜದ ಮುಖಂಡರೊಬ್ಬರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಮಹನೀಯರ ಪುತ್ಥಳಿ ಇರುವ ಉದ್ಯಾನವನವನ್ನು ಸ್ವಚ್ಛಗೊಳಿಸಬೇಕು. ಪುತ್ಥಳಿಗಳನ್ನು ಸಂರಕ್ಷಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಶಿಂತ್ರೆ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ನಗರಸಭೆ ಸದಸ್ಯರಾದ ಮುತ್ತುರಾಜ್ ಕುಷ್ಟಗಿ, ಸಿದ್ದು ಮ್ಯಾಗೇರಿ, ಸಮಾಜದ ಮುಖಂಡರಾದ ಗವಿಸಿದ್ದಪ್ಪ ಕಂದಾರಿ, ಜಿ.ಎಂ.ಬೆಲ್ಲದ್, ಗಾಳೆಪ್ಪ ಪೂಜಾರ್, ರಾಮಣ್ಣ ಕಂದಾರಿ, ಸಿದ್ರಾಮ ಹೊಸಮನಿ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು

Please follow and like us:
error