fbpx

ಜನ ಆಂದೋಲನ ಜಾಥಾಕ್ಕೆ ನ್ಯಾ. ಬಿ.ಎಸ್. ರೇಖಾ ಅವರಿಂದ ಚಾಲನೆ

ಕೋವಿಡ್-19 ಹರಡುವಿಕೆ ತಡೆಗಟ್ಟಲು ಜಾಗೃತಿ

ಕೊಪ್ಪಳ,  : ಕೋವಿಡ್-19 ಹರಡುವಿಕೆ ತಡೆಗಟ್ಟಲು ಜಾಗೃತಿ ಮೂಡಿಸಲು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಹಾಗೂ ಕಿರ್ಲೋಸ್ಕರ್ ಫೆರಸ್ ಇಂಡಸ್ಟಿçÃಸ್ ಲಿಮಿಟೆಡ್, ಕೊಪ್ಪಳ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇಂದು (ಅ.17) ಹಮ್ಮಿಕೊಳ್ಳಲಾದ “ಕೋವಿಡ್-19 ಪ್ರಚಾರಾಂದೋಲನ” “ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ” ಎಂಬ ಜನ ಆಂದೋಲನ ಜಾಥಾಕ್ಕೆ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಅಧ್ಯಕ್ಷರಾದ ಬಿ.ಎಸ್. ರೇಖಾ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಜನ ಆಂದೋಲನ ಜಾಥಾಕ್ಕೆ ಚಾಲನೆ ನೀಡಿದ ನ್ಯಾ. ಬಿ.ಎಸ್. ರೇಖಾ ಅವರು ಕೋವಿಡ್-19 ಜಾಗೃತಿ ಕುರಿತು ಪ್ರತಿಜ್ಞಾವಿಧಿ ಬೋಧಿಸಿ ನಂತರ ಮಾತನಾಡಿ, ಮಹಾಮಾರಿ ಕೋವಿಡ್-19 ಹರಡುವಿಕೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ನ್ಯಾಯಾಲಯ, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ಮತ್ತು ಎಲ್ಲೆಡೆಯಲ್ಲಿಯೂ ಜನರು ಮುಖ ಗವಸು (ಮಾಸ್ಕ್)ನ್ನು ಹಾಕಿಕೊಳ್ಳದೇ ಇರುವವರಿಗೆ ಕಾನೂನಿನ ರೀತಿಯಲ್ಲಿ ತಿಳಿ ಹೇಳುವುದು, ಜನರಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ “ಕೋವಿಡ್-19 ಪ್ರಚಾರಾಂದೋಲನ” “ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ” ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರೋನಾ ಸಾಂಕ್ರಾಮಿಕ ರೋಗವು ಶ್ರೀಮಂತ, ಬಡವ ಎಂಬ ಭೇದವಿಲ್ಲದೆ ಎಲ್ಲರನ್ನೂ ಬಿಟ್ಟೂ ಬಿಡದೇ ಕಾಡುತ್ತಿರುವ ಮಹಾಮಾರಿಯಾಗಿದೆ. ಎಲ್ಲಿಯವರೆಗೆ ಔಷಧಿ ಲಭ್ಯವಾಗುವುದಿಲ್ಲವೋ, ಅಲ್ಲಿಯವರೆಗೆ ಜಾಗ್ರತೆಯಿಂದ ಮತ್ತು ಆರೋಗ್ಯದ ಕಡೆಗೆ ಗಮನಹರಿಸುವುದಲ್ಲದೇ ನಾವೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಆಗಾಗ ಕೈ ತೊಳೆಯುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಈ ರೋಗದ ವಿರುದ್ಧ ಹೋರಾಡಬೇಕು ಎಂದರು.
ಈ ಸಂದರ್ಭದಲ್ಲಿ ತ್ವರಿತಗತಿ ವಿಶೇಷ ನ್ಯಾಯಾಲಯ-1 (ಪೋಕ್ಸೋ ನ್ಯಾಯಾಲಯ)ದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಮ್. ಜಾಲವಾದಿ, ಹಿರಿಯ ಸಿವಿಲ್ ನ್ಯಾಯಾಧೀಶರು (ಸಿಜೆಎಮ್) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಕುಮಾರ ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ (ಜೆ.ಎಮ್.ಎಫ್.ಸಿ. ನ್ಯಾಯಾಲಯ) ಮನುಶರ್ಮಾ, ಕಿರ್ಲೋಸ್ಕರ್ ಫೆರಸ್ ಇಂಡಸ್ಟಿçÃಸ್ ಲಿಮಿಟೆಡ್‌ನ ಉದಯ ಕುಲಕರ್ಣಿ ಸೇರಿದಂತೆ ವಕೀಲರು ಮತ್ತು ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟಿçÃಸ್ ಲಿಮಿಟೆಡ್ ವತಿಯಿಂದ ಮಾಸ್ಕ್ ವಿತರಿಸಲಾಯಿತು.

Please follow and like us:
error
error: Content is protected !!