ಜಲ ಜೀವನ್ ಮಿಷನ್‌ನಿಂದ ಮನೆ ಮನೆಗೆ ನೀರು : ರಾಜಶೇಖರ್ ಹಿಟ್ನಾಳ್

ಜಿಲ್ಲಾ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ,  : ಕಳೆದ ಬಾರಿ ಜಲ ಜೀವನ್ ಮಿಷನ್ ಅಡಿಯಲ್ಲಿ ಗ್ರಾಮ ಪಂಚಾಯತಿಗಳಿಗೆ ಕೆಲವೇ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ ಈ ಬಾರಿ ಎಲ್ಲ ಮನೆಗಳಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿರುವ ನಲ್ಲಿಗಳಿಲ್ಲದ ಎಲ್ಲ ಮನೆಗಳಿಗೆ ನೀರು ಒದಗಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ್ ಹೇಳಿದರು.
ಕೊಪ್ಪಳದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ (ಫೆ.11) ನಡೆದ ಜಿಲ್ಲಾ ಪಂಚಾಯತಿಯ ಜಿಲ್ಲಾಮಟ್ಟದ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲ ಜೀವನ ಮಿಷನ್ ಯೋಜನೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಒಟ್ಟು 21 ಪ್ರತ್ಯೇಕ ಪ್ಯಾಕೇಜ್ ಮಾಡಿದ್ದೇವೆ. ನಳಗಳಿಲ್ಲದ ಎಲ್ಲ ಮನೆಗಳಿಗೆ ಪೈಪ್‌ಲೈನ್ ಮಾಡುವ ಮೂಲಕ ನಳದ ವ್ಯವಸ್ಥೆ ಕಲ್ಪಿಸಿ, ನೀರು ಒದಗಿಸುತ್ತೇವೆ ಎಂದು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ 11 ಓವರ್‌ಹೆಡ್ ಟ್ಯಾಂಕ್‌ಗಳ ಕಾಮಗಾರಿಗಳು ಪೂರ್ಣಗೊಂಡಿವೆ. ಅವುಗಳನ್ನು ಪರೀಕ್ಷೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಉತ್ತಮ ಸ್ಥಿತಿಯಲ್ಲಿರುವ ಆರೋಪ್ಲಾಂಟ್‌ಗಳನ್ನು ಗ್ರಾಮ ಪಂಚಾಯತಿಗೆ ನೀಡಬೇಕು. ಬಳಿಕ ಗ್ರಾಮ ಪಂಚಾಯತಿಯವರಿಗೆ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಬೇಕು ಎಂದು ಅಧ್ಯಕ್ಷ ರಾಜಶೇಖರ್ ಹಿಟ್ನಾಳ್ ಅಧಿಕಾರಿಗೆ ಸೂಚಿಸಿದರು. ಇದಕ್ಕೆ ಅಧಿಕಾರಿ ಪ್ರತಿಕ್ರಿಯಿಸಿ, ಮಾರ್ಚ್ 1ರ ಒಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದರು.
ಭತ್ತ ಖರೀದಿ ಕೇಂದ್ರ ಆರಂಭಿಸಿದ್ದು, ಈಗಾಗಲೇ 567 ರೈತರು ಹೆಸರು ನೋಂದಾಯಿಸಿದ್ದಾರೆ. 2 ರೈಸ್ ಮಿಲ್‌ನವರು ಬ್ಯಾಂಕ್ ಗ್ಯಾರಂಟಿ ನೀಡಿದ್ದಾರೆ ಎಂದು ಆಹಾರ ಸರಬರಾಜು ಇಲಾಖೆ ಅಧಿಕಾರಿ ತಿಳಿಸಿದರು. ರೈತರು ಈಗಾಗಲೇ ಭತ್ತವನ್ನು ಮಾರಾಟ ಮಾಡಿದ್ದಾರೆ. ನೀವು ಈಗ ಖರೀದಿ ಕೇಂದ್ರ ಆರಂಭಿಸಿದ್ದೀರಿ. ಇದರಿಂದ ಏನೂ ಉಪಯೋಗ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ ಗೋನಾಳ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ರಾಜಶೇಖರ್, ಭತ್ತ ಖರೀದಿ ಕೇಂದ್ರದ ಪ್ರಕ್ರಿಯೆಯೇ ವಿಳಂಬವಾಗಿದೆ. ಅಲ್ಲದೇ ಬ್ಯಾಂಕ್‌ನವರಿಗೆ ರೈಸ್ ಮಿಲ್‌ನವರು ಗ್ಯಾರಂಟಿ ನೀಡಬೇಕು. ಹೀಗಾಗಿ ಖರೀದಿ ಕೇಂದ್ರ ಆರಂಭಿಸುವುದು ತಡವಾಗಿದೆ ಎಂದು ಸ್ಪಷ್ಟಪಡಿಸಿದರು.
ಗ್ರಾಮೀಣ ಭಾಗ ಸೇರಿದಂತೆ ಹಲವಾರು ರಸ್ತೆಗಳು ಹಾಳಾಗಿದ್ದು, ಅವುಗಳನ್ನು ಬೇಗ ದುರಸ್ತಿಗೊಳಿಸಿ ಎಂದು ಅಧ್ಯಕ್ಷ ರಾಜಶೇಖರ್ ಹಿಟ್ನಾಳ್ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ರಸ್ತೆ ಕಾಮಗಾರಿಗಳಿಗೆ ಅನುದಾನದ ಕೊರತೆ ಇದ್ದು, ಅವಶ್ಯಕತೆಗಿಂತಲೂ ಕಡಿಮೆ ಅನುದಾನ ಬಂದಿದ್ದು, ಆದ್ಯತೆಯ ಮೇಲೆ ಟೆಂಡರ್ ಕರೆದು, ಕಾಮಗಾರಿಗಳನ್ನು ಆರಂಭಿಸುತ್ತೇವೆ ಎಂದು ತಿಳಿಸಿದರು.
ಹಿರೇಹಳ್ಳದಲ್ಲಿ 9 ಸರಣಿ ಬ್ರಿಡ್ಜ್ ಕಂ ಬ್ಯಾರೇಜ್‌ಗಳು ನಿರ್ಮಾಣ ಆಗುತ್ತಿವೆ. ಇದರಲ್ಲಿ 3 ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗಳು ಪೂರ್ಣಗೊಂಡಿವೆ. 5 ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ. ದದೇಗಲ್ ಬಳಿಯ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 36 ಮಿಲಿಮೀಟರ್‌ಗಿಂತಲೂ ಹೆಚ್ಚು ಮಳೆಯಾಗಿದ್ದು, ಮುಂಗಾರು ಮತ್ತು ಹಿಂಗಾರು ಭಿತ್ತನೆ ಆರಂಭವಾಗಿದೆ. ಮುಂಗಾರಿನಲ್ಲಿ ತೊಗರಿ, ಮೆಕ್ಕೆಜೋಳ ಭಿತ್ತಿದ್ದು, ಹಿಂಗಾರಿನಲ್ಲಿ ಕಡಲೆ ಹಾಗೂ ಜೋಳ ಭಿತ್ತಲಾಗಿದೆ. ರಸಗೊಬ್ಬರ ಹಾಗೂ ಭಿತ್ತನೆ ಬೀಜಗಳನ್ನು ಅಗತ್ಯ ಪ್ರಮಾಣದಲ್ಲಿ ಪೂರೈಸಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.
ವಿದ್ಯಾರ್ಥಿ ವೇತನದ ಹಣವನ್ನು ವಾಪಸ್ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಕೇಂದ್ರಯಿAದ ನೇರವಾಗಿ ವಿದ್ಯಾರ್ಥಿಗಳ ಖಾತೆ ವೇತನ ಜಮೆ ಮಾಡಲಾಗುತ್ತದೆ. ವಸತಿಗಳು ಆರಂಭವಾಗಿದ್ದು, ಹೊಸ ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ. ಶೇ 75ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನವೀನ್ ಶಿಂಥ್ರೆ ತಿಳಿಸಿದರು.
9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುತ್ತಿದ್ದು, ಶೇ.75ರಷ್ಟು ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುತ್ತಿದ್ದಾರೆ. 6, 7, 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾಗಮದ ಮೂಲಕ ಬೋಧನೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ದೊಡ್ಡಬಸಪ್ಪ ನಿರ್ಲಕೇರಿ ತಿಳಿಸಿದರು.
ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಕೇವಲ 5 ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗೆ ಕೋವಿಡ್-19 ಪರೀಕ್ಷೆ ಕಡ್ಡಾತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಕ್ಕಮಹಾದೇವಿ ತಿಳಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಭಾಗ್ಯವತಿ ಮಾಣಿಕ್ ಬೋಲಾ ಇದ್ದರು.

Please follow and like us:
error