ಜಸ್ಟಿಸ್ ಫಾರ್ ಮನಿಷಾ ವಾಲ್ಮೀಕಿ ಅಭಿಯಾನ : ಕೊಪ್ಪಳದಲ್ಲಿ ಕಾಂಗ್ರೆಸ್ ನ ಎಸ್ಸಿ ಘಟಕದ ಪ್ರತಿಭಟನೆ

ಕೊಪ್ಪಳ : ಅತ್ಯಾಚಾರಕ್ಕೆ ಒಳಗಾಗಿ ದಾರುಣವಾಗಿ ಪ್ರಾಣ ತ್ಯಾಗ ಮಾಡಿದ ಮನಿಷಾ ವಾಲ್ಮೀಕಿ ಹತ್ಯೆಗೈದ ವಿಕೃತ ಕಾಮಿ ಕೋಮುವಾದಿ ಕಿಡಿಗೇಡಿಗಳನ್ನು ಗಲ್ಲಿಗೇರಿಸಲಿ , ಅಥವಾ ಏನ್‌ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಕೊಪ್ಪಳದಲ್ಲಿಂದು ಕಾಂಗ್ರೆಸ್ ನ ಎಸ್ಸಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರಗೈದವರ ಆಸ್ತಿ – ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಸಾವಿಗೀಡಾದ ಮನಿಷಾ ವಾಲ್ಮೀಕಿ ಕುಟುಂಬಕ್ಕೆ ಪರಿಹಾರ ಕೊಡಬೇಕು ಮತ್ತು ಕೇಂದ್ರ ಸರ್ಕಾರದ ವತಿಯಿಂದ 5 ಕೋಟಿ ರೂಪಾಯಿಗಳ ಮೊತ್ತದ ಪರಿಹಾರವನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು . ದೇಶದ ಪ್ರಜಾ ಪ್ರಭುತ್ವದ ಆಶಯಗಳಿಗೆ ದಕ್ಕೆ ಭಾರದ ಹಾಗೇ ಸಂವಿಧಾನಾತ್ಮಕವಾಗಿ ಇಚ್ಚಾಶಕ್ತಿಯನ್ನು ಗೌರವಾನ್ವಿತ ರಾಷ್ಟ್ರಪತಿಗಳು ಏತ್ತಿ ಹಿಡಿಯಬೇಕೆಂದು JUSTICE FOR MANISHA VALMIKI “ ಎಂಬ ಅಭಿಯಾನದ ರಾಷ್ಟ್ರಪತಿಗಳಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ್ ಹಿಟ್ನಾಳ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಗಾಳೆಪ್ಪ ಪೂಜಾರ, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್, ಕಾಟನ್ ಪಾಷಾ , ಮಾನ್ವಿ ಪಾಷಾ, ಸಲಿಂ ಅಳವಂಡಿ, ಶಿವಕುಮಾರ ಶೆಟ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error