ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದ ಪೂಜೆ


ಕೊಪ್ಪಳ, ಮೇ : ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಉಸ್ತುವಾರಿ ಸಚಿವರ ಕಾರ್ಯಾಲಯದ ಪೂಜಾ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇಂದು (ಮೇ.18)  ನೇರವೆರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವು ಜಿಲ್ಲಾಡಳಿತ ಭವನದಲ್ಲಿ ಜಿ.ಪಂ. ಸಭಾಂಗಣದ ಹತ್ತಿರ ದಕ್ಷಿಣದ್ವಾರದ ಕಡೆ ಇದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಮನವಿ ಅಥವಾ ದೂರುಗಳನ್ನು ಈ ಕಾರ್ಯಾಲಯದಲ್ಲಿ ಸಲ್ಲಿಸಬಹುದು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್.ವಿಶ್ವನಾಥ್ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಸಿಇಒ ರಘುನಂದನ್ ಮೂರ್ತಿ ಸೇರಿದಂತೆ ಹಲುವು ಗಣ್ಯರು ಹಾಗೂ ಸಚಿವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

Please follow and like us:
error