fbpx

ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಿ : ಸಂಗಣ್ಣ ಕರಡಿ

ಕೊಪ್ಪಳ,   : ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗಳನ್ನು ಹೆಚ್ಚಿಸಿ ಪ್ರತಿ ದಿನ ಸರಾಸರಿ ಸಾವಿರ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದು ಸಂಸದ ಸಂಗಣ್ಣ ಕರಡಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತು ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರಸ್ತುತ ಜಿಲ್ಲೆಯಲ್ಲಿ 29 ಗಂಟಲು ದ್ರವ ಸಂಗ್ರಹಣಾ ಕೇಂದ್ರಗಳಿದ್ದು, ಅವುಗಳನ್ನು 50 ಕ್ಕೆ ಹೆಚ್ಚಿಸಿ. ಪ್ರತಿದಿನ ಸರಾಸರಿ ಸಾವಿರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿ, ಶೀಘ್ರ ಮಾದರಿಯ ಫಲಿತಾಂಶವನ್ನು ಪಡೆಯಿರಿ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಬೇಗ ಪತ್ತೆ ಹಚ್ಚಿ

ಸೋಂಕು ಹರಡುವಿಕೆಯನ್ನು ನಿಯಂತ್ರಿಸಬೇಕು. ಕೋವಿಡ್-19 ನಿಯಂತ್ರಣ ಕಾರ್ಯಪಡೆಯಲ್ಲಿರುವ ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು. ಸೀಲ್‌ಡೌನ್ ಪ್ರದೇಶದಲ್ಲಿ ರ‍್ಯಾಪಿಡ್ ಟೆಸ್ಟ್ ಮಾಡಿ. ಶೀತಜ್ವರ, ಉಸಿರಾಟದ ತೊಂದರೆ, ನೆಗಡಿ, ಕೆಮ್ಮು ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಮಾಹಿತಿ ಪಡೆದು ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿ. ಇದರಿಂದ ಸೋಂಕು ಪತ್ತೆ ಹಚ್ಚುವಿಕೆ ಮತ್ತು ಹರಡುವಿಕೆಯನ್ನು ತಡೆಯಲು ಅನುಕೂಲವಾಗುತ್ತದೆ. ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಎಲ್ಲ ವೈದ್ಯಕೀಯ ಸಲಕರಣೆ, ಔಷಧಗಳನ್ನು ಲಭ್ಯವಿರುವಂತೆ ಮುಂಜಾಗ್ರತೆ ವಹಿಸಿ ಎಂದು ಅವರು ಹೇಳಿದರು.
ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಮಾತನಾಡಿ, ಕೋವಿಡ್ ಕೇರ್ ಕೇಂದ್ರಗಳಲ್ಲಿರುವವರಿಗೆ ಆರೋಗ್ಯಕರ ಆಹಾರವನ್ನು ಒದಗಿಸಿ. ಸೋಂಕು ತೀವ್ರಗತಿಯಲ್ಲಿ ಹರಡುವುದರಿಂದ  ಸೀಲ್‌ಡೌನ್ ಆಗಿರುವ ಪ್ರದೇಶದಲ್ಲಿನ ವ್ಯಕ್ತಿಗಳ ಗಂಟಲು ಮಾದರಿ ಪರೀಕ್ಷೆಗೆ ಹೆಚ್ಚು ಒತ್ತು ನೀಡಿ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆಗೆ ತಕ್ಷಣದ ಕ್ರಮ ವಹಿಸಿ ಎಂದು ಹೇಳಿದರು.
ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿನ ನ್ಯೂಮೋನಿಯಾ, ತೀವ್ರ ಉಸಿರಾಟದ ತೊಂದರೆ, ಹೃದಯ ಸಮಸ್ಯೆ, ಮೂತ್ರಪಿಂಡದ ಸಮಸ್ಯೆ ಇರುವವರಿಗೆ ಮುಂಚಿತವಾಗಿ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಸೋಂಕು ತಗುಲದಂತೆ ಎಚ್ಚರ ವಹಿಸಿ. ಸೋಂಕಿತರ ಸಂಖ್ಯೆ ಹೆಚ್ಚಾದಾಗ ಅಥವಾ ಇತರೆ ತೀವ್ರತರವಾದ ಖಾಯಿಲೆಗಳಿಂದ ಬಳಲುವ ರೋಗಿಗಳಿಗೆ ಜೀವ ಉಳಿಸಲು ವೆಂಟಿಲೇಟರ್ ಅವಶ್ಯಕವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವೆಂಟಿಲೇಟರ್ ಖರೀದಿಗೆ ಕ್ರಮ ವಹಿಸಿ. ಸರ್ಕಾರದಿಂದ ನೀಡುವ ವೆಂಟಿಲೇಟರ್ ಜೊತೆಗೆ ಅಗತ್ಯ ಪ್ರಮಾಣದಲ್ಲಿ ಜಿಲ್ಲಾಡಳಿತದಿಂದಲೂ ಖರೀದಿಸಿ ಎಂದು ಹೇಳಿದರು.
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಗ್ರಾಮ ಮಟ್ಟದಲ್ಲಿ ರ‍್ಯಾಂಡಮ್ ಚೆಕ್ ಮಾಡಲು ಆ್ಯಂಟಿಜೆನ್ ಕಿಟ್‌ಗಳನ್ನು ಹೆಚ್ಚು ತರಿಸಿಕೊಳ್ಳಿ. ಗಂಗಾವತಿಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು, ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಹೆಚ್ಚಿಸಿ. ಲಾಕ್‌ಡೌನ್‌ನಿಂದ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯತೆ ಇರುವುದರಿಂದ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟಿಗೆ ಸಮಯವನ್ನು ನಿರ್ದಿಷ್ಟ ಪಡಿಸಿ ಭಾಗಶಃ ಲಾಕ್‌ಡೌನ್‌ಗೆ  ಕ್ರಮ ಕೈಗೊಳ್ಳಬಹುದು ಎಂದು ಅಭಿಪ್ರಾಯ ಪಟ್ಟರು.
ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಮಾತನಾಡಿ, ಐಸಿಯುನಲ್ಲಿರುವ ರೋಗಿಗಳ ಚಿಕಿತ್ಸೆಗೆ ಅಗತ್ಯವಾದ ಔಷಧಗಳನ್ನು ಸರಬರಾಜು ಮಾಡುವಂತೆ ಆರೋಗ್ಯ ಇಲಾಖೆ ಆಯುಕ್ತರೊಂದಿಗೆ ಮನವಿ ಸಲ್ಲಿಸಿ. ಜಿಲ್ಲಾಸ್ಪತ್ರೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಅಗತ್ಯವಾಗಿರುವ ಎಲ್ಲ ಔಷಧಗಳು ಸಂಗ್ರಹದಲ್ಲಿರಬೇಕು. ಕೋವಿಡ್‌ನಿಂದ ಆದ ಸಾವುಗಳು ಮತ್ತು ಸಹಜ ಮತ್ತು ಇತರೆ ಖಾಯಿಲೆಗಳಿಂದ ಆದ ಸಾವುಗಳ ಲೆಕ್ಕವನ್ನು ವೈದ್ಯರಿಂದ ಪಡೆಯಿರಿ. ವೆಂಟಿಲೇಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಿ. ತಾಲ್ಲೂಕು ಆಸ್ಪತ್ರೆಗೆ ವೆಂಟಿಲೇಟರ್‌ಗಳನ್ನು ಒದಗಿಸಿ ಸ್ಟಾಫ್ ನರ್ಸ್ಗಳಿಗೆ ವೆಂಟಿಲೇಟರ್ ನಿರ್ವಹಣೆ ಮತ್ತು ಬಳಕೆ ಕುರಿತು ತರಬೇತಿ ನೀಡಿ. ವಿಷ ಸೇವನೆ, ಹಾವು ಕಡಿತದ ಪ್ರಕರಣಗಳಲ್ಲಿ ವೆಂಟಿಲೇಟರ್‌ಗಳ ಅಗತ್ಯ ಹೆಚ್ಚಿರುತ್ತದೆ. ಜಿಲ್ಲಾಸ್ಪತ್ರೆಗೆ ರೋಗಿಯನ್ನು ತರುವಷ್ಟರಲ್ಲಿ ಮಾರ್ಗಮಧ್ಯೆಯೇ ಅವರು ಸಾವನ್ನಪ್ಪುತ್ತಾರೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಲಭ್ಯವಿದ್ದರೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ಪ್ರತಿ ಗ್ರಾಮ ಪಂಚಾಯತಿಗೆ ರ‍್ಯಾಂಡಮ್ ಪರೀಕ್ಷೆಗೆ ಆ್ಯಂಟಿಜೆನ್ಸ್ ಕಿಟ್ ನೀಡಲಾಗಿದೆ. ಇದರಿಂದ ಅರ್ಧ ಗಂಟೆಯಲ್ಲಿ ಫಲಿತಾಂಶ ದೊರೆಯುತ್ತದೆ. ಕೋವಿಡ್ ಪರೀಕ್ಷೆಯಲ್ಲಿ ಪ್ರಾಥಮಿಕ ಸಂಪರ್ಕಿತರಿಗೆ ಆದ್ಯತೆ ನೀಡಲಾಗುತ್ತಿದೆ. ಸೀಲ್‌ಡೌನ್ ಪ್ರದೇಶದಲ್ಲಿ ಮೊಬೈಲ್ ಸ್ಯಾಂಪಲ್ ಕಲೆಕ್ಟಿಂಗ್ ವೆಹಿಕಲ್ ಬಳಸಿ ಮಾದರಿ ಸಂಗ್ರಹಕ್ಕೆ  ಯೋಜಿಸಲಾಗಿದ್ದು, ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ. ಜಿಲ್ಲೆಯಲ್ಲಿ ಇದುವರೆಗೂ 368 ಸೋಂಕಿತರು, 2343 ಪ್ರಾಥಮಿಕ ಸಂಪರ್ಕಿತರು, 3000 ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಲಾಗಿದೆ. ಸೋಂಕಿನ ಲಕ್ಷಣಗಳಿರುವವರಿಗೆ ಕೋವಿಡ್-19 ಟೆಸ್ಟ್ ಮಾಡಲು ಆದ್ಯತೆ ನೀಡಲಾಗುತ್ತಿದೆ. ಉಳಿದಂತೆ ಸೋಂಕಿನ ಲಕ್ಷಣವಿಲ್ಲದವರ ಪರೀಕ್ಷೆ ಮಾಡಲಾಗುತ್ತದೆ.  ಸಾರಿ ಪ್ರಕರಣಗಳಲ್ಲಿ ರೋಗಿಗಳು ಆಸ್ಪತ್ರೆಗೆ ದಾಖಲಾಗುವುದು ವಿಳಂಬವಾಗುತ್ತಿದೆ. ಇದರಿಂದ ಸೋಂಕು ಪತ್ತೆಗೆ ತಡವಾಗುತ್ತಿದೆ. ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೌಲಭ್ಯ ಒದಗಿಸುವ ಕುರಿತು ಖಾಸಗಿ ಆಸ್ಪತ್ರೆಯವರೊಂದಿಗೆ ಚರ್ಚಿಸಲಾಗಿದೆ. ಆಕ್ಸಿಜನ್ ಹೊಂದಿರುವ ಬೆಡ್‌ಗಳನ್ನು ಕೋವಿಡ್ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಇತರೆ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದೆ. ಜಿಲ್ಲೆಯ ಖಾಸಗಿ ವೈದ್ಯರಿಗೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ನೋಟಿಸ್ ನೀಡಲಾಗಿದ್ದು, ಅಗತ್ಯ ಬಿದ್ದಲ್ಲಿ ಅವರು ಸೇವೆಗೆ ಹಾಜರಾಗಬೇಕು ಮತ್ತು ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೇಟರ್, ಥರ್ಮಲ್ ಸ್ಕಾö್ಯನರ್ ಕಿಟ್ ಒದಗಿಸಲು ಕ್ರಮ ಕಗೊಳ್ಳಲಾಗುವುದು ಎಂದು ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆ ಕುರಿತ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜು ಟಿ., ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎಸ್.ಬಿ.ದಾನರೆಡ್ಡಿ, ಕಿಮ್ಸ್ ನಿರ್ದೇಶಕ ವಿಜಯನಾಥ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error
error: Content is protected !!