ಜಿಲ್ಲೆಯಲ್ಲಿ 173 ಫಲಾನುಭವಿಗಳಿಗೆ ಕೋವಿಡ್ ಲಸಿಕೆ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ : ಕೋವಿಡ್-19 ವ್ಯಾಕ್ಸಿನೇಶನ್ ಲಸಿಕಾ ಕಾರ್ಯಕ್ರಮದಡಿ ಇಂದು ಕೊಪ್ಪಳ ಜಿಲ್ಲೆಯಲ್ಲಿ 173 ಜನರಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕೊಪ್ಪಳ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಇಂದು (ಜ.16) ಜಿಲ್ಲೆಯ ಕೊಪ್ಪಳ ಜಿಲ್ಲಾ ಆಸ್ಪತ್ರೆ, ಕುಷ್ಟಗಿ ಸಾರ್ವಜನಿಕ ಆಸ್ಪತ್ರೆ, ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆ ಹಾಗೂ ಗಂಗಾವತಿಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನು ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದಲ್ಲಿ ಲಸಿಕಾ ಕೇಂದ್ರಗಳಲ್ಲಿ ಜಿಲ್ಲೆಯ ಸಂಸದರು ಸ್ಥಳಿಯ ಶಾಶಕರು ಹಾಗೂ ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಲಸಿಕೆ ನೀಡಿದ ವಿವರ;
ಕೋವಿಡ್-19 ಲಸಿಕಾ ಕಾರ್ಯಕ್ರದಡಿ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ 76 ಗುರಿ ನಿಗದಿಪಡಿಸಿದ್ದು, 20 ಜನರಿಗೆ ಲಸಿಕೆ ನೀಡಲಾಗಿದೆ.  ಗಂಗಾವತಿಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ 100 ಗುರಿ, ಸಾಧನೆ-59, ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಗುರಿ, ಸಾಧನೆ-44 ಮತ್ತು ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಯಲ್ಲಿ 68 ಗುರಿ, ಸಾಧನೆ-50, ಒಟ್ಟು ಜಿಲ್ಲೆಯಲ್ಲಿ 344 ಗುರಿ ನಿಗದಿಪಡಿಸಲಾಗಿದ್ದು, 173 ಜನರಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ.
ಲಸಿಕೆ ನೀಡಿದ ನಂತರ ಎಲ್ಲಾ ಫಲಾನುಭವಿಗಳನ್ನು ಪರಿವಿಕ್ಷಣ ಕೊಠಡಿಯಲ್ಲಿ ಕಾಯ್ದಿರಿಸಲಾಗಿ ನಂತರ ಅವರನ್ನು ಮುಂದಿನ ಕೆಲಸಗಳಿಗೆ ಅನುವು ಮಾಡಿಕೊಡಲಾಯಿತು. ಹಾಗೂ ಲಸಿಕೆ ಪಡೆದ ಫಲಾನುಭವಿಗಳಲ್ಲಿ ಯಾರಿಗೂ ಅಡ್ಡಪರಿಣಾಮಗಳು ಉಂಟಾಗಿರುದಿಲ್ಲ.  ಲಸಿಕಾ ಮೇಲ್ವಿಚಾರಣೆಗಾಗಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳನ್ನು ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳನ್ನು ನೇಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error