ಜಿ.ಪಂ: ಖಾಲಿ ಇರುವ ಬಿಎಫ್‌ಟಿ ಸ್ಥಾನಗಳಿಗೆ ನೇಮಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ,  : ಜಿಲ್ಲಾ ಪಂಚಾಯತಿಯ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 2020-21ನೇ ಸಾಲಿಗೆ ಖಾಲಿ ಇರುವ ಬಿಎಫ್‌ಟಿ ಸ್ಥಾನಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಒಟ್ಟು 16 ಬಿಎಫ್‌ಟಿ ಸ್ಥಾನಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. (ಈ ಹುದ್ದೆ ಖಾಯಂ ಹುದ್ದೆಯಲ್ಲ. ಸೇವೆಯನ್ನು ಒಂದು ವರ್ಷಕ್ಕೆ ಮಿತಿಗೊಳಿಸಲಾಗಿದೆ.) ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರಾಗಿರಬೇಕು. ಅಂದರೆ, ಹಿಂದಿನ ಮೂರು ವರ್ಷಗಳ ಕಾಲ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಿರಬೇಕು. ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಂತೆ ಯೋಜನೆಯಡಿ ಕೂಲಿಕಾರರಾಗಿ ಕೆಲಸ ಮಾಡಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 18 ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನಿಯಮಾನುಸಾರ ಪ್ರಾಧಾನ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 12 ಸಾವಿರ ರೂ. ಗಳ ಸಂಭಾವನೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಂಬAಧಪಟ್ಟ ತಾಲ್ಲೂಕ ಪಂಚಾಯತ ಮಹಾತ್ಮಗಾಂಧಿ ನರೇಗಾ ವಿಭಾಗದಲ್ಲಿ ಪಡೆದುಕೊಂಡು ಭರ್ತಿಮಾಡಿ, ಪೂರಕ ದಾಖಲೆಗಳೊಂದಿಗೆ ಸಂಬAಧಪಟ್ಟ ತಾಲ್ಲೂಕ ಪಂಚಾಯತಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. ಕೊಪ್ಪಳ:08539-220399, ಗಂಗಾವತಿ:08533-230230, ಕುಕನೂರು:9880942636, ಕುಷ್ಟಗಿ:8747903332, ಕನಕಗಿರಿ:9743120230, ಕಾರಟಗಿ:8150093294ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ  ತಿಳಿಸಿದ್ದಾರೆ.

Please follow and like us:
error