ಡಾ. ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಕ್ರೂರ ಕೊಲೆ ಖಂಡಿಸಿ ಎಐಡಿಎಸ್ಓ,ಎ ಐ ಡಿ ವೈ ಓ ಪ್ರತಿಭಟನೆ

Koppal : ಹೈದರಾಬಾದ್ ನ ಪಶುವೈದ್ಯೆ ಡಾ. ಪ್ರಿಯಾಂಕಾ ರೆಡ್ಡಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕ್ರೂರ ಕೊಲೆ ಮಾಡಿದವರನ್ನು ಉಗ್ರವಾಗಿ ನಿದರ್ಶನವಾಗಿ ಶಿಕ್ಷೆ ವಿಧಿಸಬೇಕೆಂದು ಕೊಪ್ಪಳದ ಅಶೋಕ ವೃತ್ತದಲ್ಲಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ(ಎಐಡಿಎಸ್ಓ ) ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಎ ಐ ಡಿ ವೈ ಓ) ಕೊಪ್ಪಳ ಜಿಲ್ಲಾ ಸಮಿತಿ ಜಂಟಿಯಾಗಿ ಪ್ರತಿಭಟನೆ ನಡೆಸಿದವು. ಈ ಘಟನೆಯನ್ನು ಖಂಡಿಸಿ ಸಂಘಟನೆಯ ಪ್ರಮುಖರು ಮತ್ತು ವಿದ್ಯಾರ್ಥಿಗಳು ತೀವ್ರವಾಗಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಘೋಷಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಕೊಪ್ಪಳದ ಹಿರಿಯ ಬಂಡಾಯ ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಮಾತನಾಡುತ್ತಾ ಯುವ ಪಶುವೈದ್ಯ ದಿನನಿತ್ಯದ ಕೆಲಸ ಮುಗಿಸಿ ಮನೆಗೆ ತೆರಳುವಾಗ ನಾಲ್ಕು ಜನ ದುಷ್ಕರ್ಮಿಗಳು ಸಹಾಯ ಮಾಡುವ ನೆಪವೊಡ್ಡಿ ದುಷ್ಕೃತ್ಯ ಎಸಗಿದ್ದಾರೆ. ಉಸಿರುಗಟ್ಟಿಸಿ ಸಾಯಿಸಿದ ಮೃತದೇಹವನ್ನು ಸುಟ್ಟಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಭಾರತ ಒಂದು ಮಹಾನ್ ಸಾಂಸ್ಕೃತಿಕ ವೈವಿಧ್ಯತೆಗಳನ್ನು ಹೊಂದಿರುವ ಸ್ತ್ರೀಯರನ್ನು ಗೌರವದಿಂದ ಕಾಣುವಂತಹ ನಾಡಾಗಿತ್ತು.ಆದರೆ ಇಂಥ ಘಟನೆಗಳು ಮರುಕಳಿಸುತ್ತಿರುವುದು ನೋವಿನ ಸಂಗತಿ. ಇದಕ್ಕೆಲ್ಲಾ ಇವತ್ತಿನ ರಾಜಕೀಯ ವ್ಯವಸ್ಥೆ ಹದಗೆಟ್ಟಿರುವುದು. ಸ್ವಹಿತಾಸಕ್ತಿಗಳಿಗಾಗಿ ಪವಿತ್ರ ರಾಜಕೀಯ ವ್ಯವಸ್ಥೆಗೆ ದ್ರೋಹ ಬಗೆದು ನೊಂದವರ ನೋವಿನ ಸಮಸ್ಯೆಗಳಿಗೆ ಸ್ಪಂದಿಸದೆ ತಮ್ಮ ಅಧಿಕಾರದ ಲಾಲಸಗೆ ಕೆಳಮಟ್ಟಕ್ಕೆ ಇಳಿದಿದ್ದಾರೆ. ಗಾಂಧಿಯನ್ನು ಕೊಂದವರು ದೇಶಭಕ್ತರೆಂದು ಬೀಗುತ್ತಿದ್ದಾರೆ ಇಂಥ ಘಟನೆಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ತಲೆತಗ್ಗಿಸುವಂತಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಮಹಿಳೆಯರು ಓದಿನ ಜೊತೆಗೆ ಹೋರಾಡಲು ಮುಂದಾಗಬೇಕೆಂದು ಕರೆ ನೀಡಿದರು. ಎ ಐ ಡಿ ವೈ ಒ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಶರಣು ಗಡ್ಡಿ ಮಾತನಾಡುತ್ತ ಇದೊಂದು ಅಮಾನವೀಯ ಸಂಗತಿಯಾಗಿದ್ದು ಪ್ರತಿಯೊಬ್ಬರ ಹೃದಯ ಕಲಕುವಂತ ಕ್ರೂರ ಘಟನೆ ಕೇವಲ ಹೈದರಾಬಾದ್ ನಲ್ಲಿ ಲಷ್ಟೇ ಅಲ್ಲದೆ ದೇಶಾದ್ಯಂತ ಘಟನೆಯನ್ನು ಖಂಡಿಸಿ ಪ್ರತಿಭಟನೆ ಮೂಲಕ ಕಠೋರವಾಗಿ ಖಂಡಿಸಲಾಗುತ್ತದೆ. ದೇಶದಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸುವಲ್ಲಿ ಆಳ್ವಿಕೆ ಸರ್ಕಾರಗಳು ವಿಫಲವಾಗಿವೆ. ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕಿರುಕುಳ, ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದರೂ ಶಿಕ್ಷೆ ಪ್ರಮಾಣ ಮಾತ್ರ ಕಡಿಮೆ ಇದೆ. ಮಹಿಳೆಯರ ಅಭದ್ರತೆಗೆ ಕಾರಣವಾದ ಅಶ್ಲೀಲ ಸಿನಿಮಾ, ಜಾಹೀರಾತುಗಳನ್ನು ನಿಷೇಧಿಸದೆ ವ್ಯಾಪಕ ಪ್ರಚಾರಕ್ಕೆ ಅನುಮತಿ ನೀಡುತ್ತಿರುವ ಪರಿಣಾಮ ಮಹಿಳೆಯರ ಬದುಕು ಅತಂತ್ರ ಸ್ಥಿತಿಗೆ ತಲುಪಿದೆ. ಹಾಗಾಗಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ವಿಧಿಸಬೇಕು, ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಜೂಡೋ, ಕರಾಟೆ ಕಲಿಸಿ ಸ್ತ್ರೀಯರ ರಕ್ಷಣೆಗೆ ಶಕ್ತಿ ತುಂಬಲು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಗಳಿಗೆ ಒತ್ತಾಯಿಸಿದರು. ಎ ಐ ಡಿ ಎಸ್ ಒ ಸಂಘಟನೆಯ ಜಿಲ್ಲಾ ಸಂಚಾಲಕ ರಮೇಶ್ ವಂಕಲಕುಂಟಿ, ದೇವರಾಜ್, ಎ ಐ ಡಿ ವೈ ಓಸಂಘಟನೆಯ ಜಿಲ್ಲಾ ಸಂಘಟನಾಕಾರರಾದ ಶರಣಬಸವ ಪಾಟೀಲ್ ಕಾರ್ಯ ಕರ್ತರಾದ ರಾಯಣ್ಣ ಗಡ್ಡಿ ಹುಲ್ಲೇಶ್, ಪ್ರಭು, ರಾಜಾಬಕ್ಷಿ, ಮಂಜುನಾಥ್, ಭೀಮೇಶ್, ಪ್ರಶಾಂತ್, ಅಫ್ರೀನ್, ಶಾಹಿದಾ, ಕೀರ್ತಿ, ಉಷಾ ಬೇರೆ ಬೇರೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Please follow and like us:

Related posts