ಡಿ. 03 ರಂದು ಕೊಪ್ಪಳದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ


ಕೊಪ್ಪಳ, : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳು ಹಾಗೂ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ವಿಕಲಚೇತನರ ದಿನಾಚರಣೆ-2020’’ ಕಾರ್ಯಕ್ರಮವನ್ನು ಡಿಸೆಂಬರ್. 03 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಘನ ಉಪಸ್ಥಿತರಿರುವರು.  ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಬಸವರಾಜ ಪಾಟೀಲ್ ಇಟಗಿ ಹಾಗೂ ಡಾ. ಚಂದ್ರಶೇಖರ್ ಬಿ. ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮೀ ವಿ.ಮಹೇಶ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶೀಧರ್ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಎಸ್.ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error